ಕಡಬ, ಆಗಸ್ಟ್ 8, 2024 : ಆಲಂಕಾರು ಶ್ರೀ ದುರ್ಗಾಂಬಾ ಪದವಿ ಪೂರ್ವ ಕಾಲೇಜಿನಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ (ರಿ) ಕಡಬ ಹಾಗೂ ಅಖಿಲ ಕರ್ನಾಟಕ ಜನ ಜಾಗೃತಿ ವೇದಿಕೆ ಟ್ರಸ್ಟ್ (ರಿ) ಕಡಬ ತಾಲೂಕು ಇದರ ಆಶ್ರಯದಲ್ಲಿ ಸ್ವಾಸ್ಥ್ಯ ಸಂಕಲ್ಪ ಮಾಸಾಚರಣೆ 2024 ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.
ಈ ಕಾರ್ಯಕ್ರಮವನ್ನು ಶಾಲಾ ಆಡಳಿತ ಮಂಡಳಿಯ ಅಧ್ಯಕ್ಷರಾದ ಶ್ರೀ ದಯಾನಂದ ರೈ ಮನವಳಿಕೆ ಅವರು ದೀಪ ಪ್ರಜ್ವಲನೆ ಮಾಡಿ ಉದ್ಘಾಟಿಸಿದರು. ಈ ಕಾರ್ಯಕ್ರಮದ ಸಭಾಧ್ಯಕ್ಷತೆಯನ್ನು ಶ್ರೀ ಇಂದುಶೇಖರ ಶೆಟ್ಟಿ, ಅಧ್ಯಕ್ಷರು, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಆಲಂಕಾರು ವಲಯ ಇವರು ವಹಿಸಿಕೊಂಡಿದ್ದರು. ಮುಖ್ಯ ಅತಿಥಿಗಳಾಗಿ ಶ್ರೀ ದುರ್ಗಾಂಬಾ ಪದವಿ ಪೂರ್ವ ಕಾಲೇಜು ಅಲಂಕಾರಿನ ಪ್ರಾಂಶುಪಾಲರಾದ ಶ್ರೀಮತಿ ರೂಪ ಎಂ ಟಿ, ಆಲಂಕಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಉಪಾಧ್ಯಕ್ಷರಾದ ಶ್ರೀ ಪ್ರದೀಪ್ ರೈ ಮನವಳಿಕೆ, ಪ್ರಗತಿ ಬಂದು ಸ್ವಸಹಾಯ ಸಂಘಗಳ ಒಕ್ಕೂಟ ಆಲಂಕಾರಿನ ಅಧ್ಯಕ್ಷರಾದ ಶ್ರೀಮತಿ ಶಾರದಾ, ಮುಖ್ಯಗುರುಗಳಾದ ನವೀನ್ ರೈ ಬೆಟ್ಟಂಪಾಡಿ, ಆಡಳಿತಾಧಿಕಾರಿಗಳಾದ ಶ್ರೀಪತಿ ರಾವ್ ಎಚ್, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ (ರಿ ) ಕಡಬ ದ ಯೋಜನಾಧಿಕಾರಿಗಳಾದ ಶ್ರೀ ಮೇದಪ್ಪ ಗೌಡ ನಾವೂರು,ಉಪಸ್ಥಿತರಿದ್ದರು.
ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ ಶ್ರೀ ಕ್ಷೇತ್ರ ಧರ್ಮಸ್ಥಳ ಮದ್ಯ ವರ್ಚನ ಶಿಬಿರಗಳ ಶಿಬಿರಾಧಿಕಾರಿಯಾದ ಶ್ರೀ ದೇವಿಪ್ರಸಾದ್ ನಾರಾವಿ ಅವರು ವಿದ್ಯಾರ್ಥಿಗಳು ದುಶ್ಚಟಗಳಿಗೆ ಬಲಿಯಾಗದ ಹಾಗೆ ಯಾವ ರೀತಿ ಮುನ್ನೆಚ್ಚರಿಕೆ ಕ್ರಮಗಳನ್ನು ವಹಿಸಬೇಕು ಎಂದು ಕೆಲವೊಂದು ನೈಜ ಘಟನೆಗಳ ಮೂಲಕ ವಿವರಿಸಿದರು. ಮಾದಕ ವಸ್ತುಗಳ ಮೋಹಕ್ಕೆ ಬಲಿ ಬಿದ್ದು ಜೀವನವನ್ನು ಕಳೆದುಕೊಂಡ ಕೆಲವೊಂದು ಜನರ ಉದಾಹರಣೆಯನ್ನು ನೀಡಿ ಯಾವ ವಿದ್ಯಾರ್ಥಿಯು ಅಂತಹ ಚಟಕ್ಕೆ ಬಲಿಯಾಗಬಾರದು ಎಂದು ಕರೆ ನೀಡಿದರು. ಮತ್ತು ಎಲ್ಲಾ ವಿದ್ಯಾರ್ಥಿಗಳಿಗೆ ದುಶ್ಚಟಗಳ ವಿರುದ್ಧ ಪ್ರತಿಜ್ಞಾ ವಿಧಿ ಬೋಧಿಸಿದರು.
ಈ ಕಾರ್ಯಕ್ರಮದಲ್ಲಿ ವಲಯ ಮೇಲ್ವಿಚಾರಕರಾದ ಶ್ರೀಮತಿ ಸುಜಾತ ಬಿ, ಕಾರ್ಯಕ್ರಮ ಸಂಯೋಜಕರುಗಳಾದ ಸೇವಾ ಪ್ರತಿನಿಧಿಗಳು ಪ್ರೇಮ, ಮೋಹಿನಿ ವಿಶ್ವನಾಥ, ಕವಿತ,ಗೀತಾ ಅವರು ಉಪಸ್ಥಿತರಿದ್ದರು. ಆಂಗ್ಲಭಾಷಾ ಶಿಕ್ಷಕರಾದ ಜನಾರ್ಧನ ಅವರು ಎಲ್ಲರನ್ನು ಸ್ವಾಗತಿಸಿದರು. ವಲಯ ಮೇಲ್ವಿಚಾರಕರಾದ ಶ್ರೀಮತಿ ಸುಜಾತ ಬಿ ಯವರ ವಂದನಾರ್ಪಣೆಯೊಂದಿಗೆ ಕಾರ್ಯಕ್ರಮ ಮುಕ್ತಾಯವಾಯಿತು.