ಬಡಗಕರಂದೂರು: ಕರ್ನಾಟಕ ಮಿನಿ ಒಲಿಂಪಿಕ್ಸ್‌ನ ರಾಜ್ಯಮಟ್ಟದ ಕಬಡ್ಡಿ ಪಂದ್ಯಾಟಕ್ಕೆ ಸರ್ಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ, ಬಡಗಕರಂದೂರು ಶಾಲೆಯ 8ನೇ ತರಗತಿಯ ವಿದ್ಯಾರ್ಥಿ ಸಾತ್ವಿಕ್ ಆಯ್ಕೆಯಾಗಿದ್ದಾರೆ. ಬೆಂಗಳೂರಿನಲ್ಲಿ ನಡೆಯಲಿರುವ ಈ ಸ್ಪರ್ಧೆಯಲ್ಲಿ ಅವರು ಭಾಗವಹಿಸಲಿದ್ದಾರೆ.

ಸಾತ್ವಿಕ್ ಅವರ ಈ ಸಾಧನೆಗೆ ಶಾಲೆಯ ಮುಖ್ಯ ಶಿಕ್ಷಕರು, ಅಧ್ಯಾಪಕ ವೃಂದ, ಎಸ್‌ಡಿಎಂಸಿ ಅಧ್ಯಕ್ಷರು ಹಾಗೂ ಸರ್ವ ಸದಸ್ಯರು, ವಿದ್ಯಾರ್ಥಿಗಳು ಮತ್ತು ಪೋಷಕರು ಅಭಿನಂದನೆ ಸಲ್ಲಿಸಿ, ಮುಂದಿನ ಸ್ಪರ್ಧೆಯಲ್ಲಿ ಉತ್ತಮ ಪ್ರದರ್ಶನ ನೀಡುವಂತೆ ಶುಭ ಹಾರೈಸಿದ್ದಾರೆ.