ಬಜ್ಪೆ, 26 ಆಗಸ್ಟ್ 2025: ಸಂತ ಜೋಸೆಫರ ಪದವಿ ಪೂರ್ವ ಕಾಲೇಜು ಬಜ್ಪೆ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ. ಸಿ. ಟ್ರಸ್ಟ್ (ರಿ) ಮತ್ತು ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಇವುಗಳ ಆಶ್ರಯದಲ್ಲಿ ಕಾಲೇಜಿನ ವಿದ್ಯಾರ್ಥಿಗಳಿಗೆ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮವು ನಡೆಯಿತು. ಕಾಲೇಜಿನ ಪ್ರಭಾರ ಪ್ರಾಂಶುಪಾಲರಾದ ಶ್ರೀ ರಾಮಕೃಷ್ಣ ಉಡುಪ ಕಾರ್ಯಕ್ರಮ ಉದ್ಘಾಟಿಸಿ ಸ್ವಾಗತಿಸಿದರು.

ಜನಜಾಗೃತಿ ವೇದಿಕೆಯ ಕಾರ್ಯಕರ್ತರಾದ ಶ್ರೀ ದೇವಿ ಪ್ರಸಾದ್ ಮಾತನಾಡಿ ವಿದ್ಯಾರ್ಥಿಗಳಿಗೆ ಮಾದಕ ವಸ್ತುಗಳಿಂದ ದೂರವಿರುವಂತೆ ಕರೆ ನೀಡಿದರು. ಟ್ರಸ್ಟಿನ ಬಜ್ಪೆ ವಲಯದ ಮೇಲ್ವಿಚಾರಕರಾದ ಶ್ರೀಮತಿ ಅರುಣಾ, ಉಪನ್ಯಾಸಕರು ಮತ್ತು ವಿದ್ಯಾರ್ಥಿಗಳಿಗಳು ಭಾಗವಹಿಸಿದ್ದರು