ಬಲ್ಮಠ, 29 ಜುಲೈ 2026: ಸರಕಾರಿ ಪದವಿಪೂರ್ವ ಬಾಲಕಿಯರ ಕಾಲೇಜಿನಲ್ಲಿ ಪರಿಸರ ಸಂಘದ ಆಶ್ರಯದಲ್ಲಿ ಪರಿಸರ ಜಾಗೃತಿ ಕುರಿತು ವಿಶೇಷ ಉಪನ್ಯಾಸ ಕಾರ್ಯಕ್ರಮ ಯಶಸ್ವಿಯಾಗಿ ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರಾಂಶುಪಾಲರಾದ ಶ್ರೀಮತಿ ವನಿತಾ ದೇವಾಡಿಗ ವಹಿಸಿದ್ದರು. ಮಂಗಳೂರು ವಿಶ್ವವಿದ್ಯಾನಿಲಯದ ಜೀವ ವಿಜ್ಞಾನ ವಿಭಾಗದ ಪ್ರಾಧ್ಯಾಪಕರಾದ ಡಾ. ಪ್ರಶಾಂತ್ ನಾಯಕ್ ಮುಖ್ಯ ಅತಿಥಿಗಳಾಗಿ ಭಾಗವಹಿಸಿ, ಪರಿಸರ ಜಾಗೃತಿ, ಮಾಲಿನ್ಯ ತಡೆಗಟ್ಟುವಿಕೆ, ಪ್ಲಾಸ್ಟಿಕ್ ಬಳಕೆಯ ನಿಷೇಧ, ಗಿಡ ನೆಡುವಿಕೆಯ ಮಹತ್ವ ಹಾಗೂ ಪರಿಸರ ಸಂರಕ್ಷಣೆಯಲ್ಲಿ ಪ್ರತಿಯೊಬ್ಬರ ಜವಾಬ್ದಾರಿಯ ಕುರಿತು ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು.

ಕಾರ್ಯಕ್ರಮದಲ್ಲಿ ಕನ್ನಡ ಉಪನ್ಯಾಸಕರಾದ ಶ್ರೀಮತಿ ಯಶೋಧ ಉಪಸ್ಥಿತರಿದ್ದರು. ಜೀವಶಾಸ್ತ್ರ ಉಪನ್ಯಾಸಕರಾದ ಶ್ರೀ ಬಾಲಕೃಷ್ಣ ಪ್ರಾಸ್ತಾವಿಕ ನುಡಿಗಳನ್ನಾಡಿದರು. ಮನೋವಿಜ್ಞಾನ ಉಪನ್ಯಾಸಕರಾದ ಶ್ರೀ ಪ್ರಭಾಕರ ಎಸ್. ಬಿ. ಅವರು ಮುಖ್ಯ ಅತಿಥಿಗಳನ್ನು ಪರಿಚಯಿಸಿದರು.

ಉಪನ್ಯಾಸದ ಬಳಿಕ ಮುಖ್ಯ ಅತಿಥಿಗಳು, ಪ್ರಾಂಶುಪಾಲರು, ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳು ಕಾಲೇಜು ಆವರಣದಲ್ಲಿ ಸಸಿ ನೆಡುವ ಮೂಲಕ ಪರಿಸರ ಸಂರಕ್ಷಣೆಯ ಸಂಕಲ್ಪವನ್ನು ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಪರಿಸರ ಸಂಘದ ಸದಸ್ಯರು, ಕಾಲೇಜಿನ ಚುನಾಯಿತ ವಿದ್ಯಾರ್ಥಿ ಪ್ರತಿನಿಧಿಗಳು, ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದರು.

Leave a Reply

Your email address will not be published. Required fields are marked *

You May Also Like

ಎಲ್.ಸಿ.ಆರ್ ಇಂಡಿಯನ್ ಪದವಿ ಕಾಲೇಜು ಕಕ್ಯಪದವು 100% ಫಲಿತಾಂಶ

ಕಕ್ಯಪದವು : ಎಲ್.ಸಿ.ಆರ್ ವಿದ್ಯಾಸಂಸ್ಥೆಯ 2023-24 ನೇ ಶೈಕ್ಷಣಿಕ ಸಾಲಿನ ( NEP ) ಮಂಗಳೂರು…

Local Talent Shines Bright: Trisha from Belthangady Selected for DKD Reality Show

Ms. Trisha, talented daughter of Mr. Prashant and Mrs. Shailaja, Guruvayanakere, has…

St. Joseph’s P U College, Bajpe Hosts Students’ Council Inauguration and Investiture Program

Bajpe, 23 June 2025: St. Joseph’s P U College, Bajpe held the…

ಗಾಯನ ಸ್ಪರ್ಧೆಯಲ್ಲಿ ಎಲ್ ಸಿ ಆರ್ ಸಂಸ್ಥೆಯ ವಿದ್ಯಾರ್ಥಿಗಳ ಸಾಧನೆ 

ಇರ್ವತ್ತೂರು, ಆಗಸ್ಟ್ 16, 2024 : ಇರ್ವತ್ತೂರು ಗ್ರಾಮ ಪಂಚಾಯತ್ ನಲ್ಲಿ ಭಾರತ್ ಸ್ಕೌಟ್ಸ್ ಮತ್ತು…