ಮಂಗಳೂರು: ಬಲ್ಮಠ ಸರಕಾರಿ ಪದವಿ ಪೂರ್ವ ಬಾಲಕಿಯರ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದ 2025-26ನೇ ಸಾಲಿನ ಕಾರ್ಯಕ್ರಮಗಳ ಉದ್ಘಾಟನೆ ಇತ್ತೀಚಿಗೆ ನೆರೆವೇರಿತು.
ಉದ್ಘಾಟನೆ ನೆರವೇರಿಸಿದ ಸರಕಾರಿ ಪ್ರಥಮ ದರ್ಜೆ ಕಾಲೇಜು ಬಲ್ಮಟ್ಟ ಇಲ್ಲಿನ ಸಹಾಯಕ ಪ್ರಾಧ್ಯಾಪಕರಾದ ಡಾ.ಸುಮನಾ ಬಿ ಇವರು ಮಾತನಾಡಿ ವಿದ್ಯಾರ್ಥಿಗಳಲ್ಲಿ ಶಿಸ್ತು, ಸಮಯಪ್ರಜ್ಞೆ, ಸಹಬಾಳ್ವೆ ಹಾಗೂ ಸೇವಾ ಮನೋಭಾವನೆಯನ್ನು ಮೂಡಿಸುವುದು ಎನ್ಎಸ್ಎಸ್ನ ಧ್ಯೇಯವಾಗಿದ್ದು, ವಿದ್ಯಾರ್ಥಿನಿಯರು ಇದರ ಸದುಪಯೋಗಪಡಿಸಿಕೊಂಡು ಸಮಾಜ ಹಾಗೂ ದೇಶದ ಸತ್ಪ್ರಜೆಗಳಾಗಿ ಮೂಡಿ ಬರಬೇಕೆಂದು ತಿಳಿಸಿದರು.
ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಪ್ರಾಂಶುಪಾಲರಾದ,ಶ್ರೀಮತಿ ವನಿತಾ ದೇವಾಡಿಗ ಇವರು ಎನ್ಎಸ್ಎಸ್ ಸ್ವಯಂಸೇವಕರಿಗೆ ಪ್ರತಿಜ್ಞಾವಿಧಿಯನ್ನು ಬೋಧಿಸಿದರು ಹಾಗೂ ಕಾಲೇಜಿನಲ್ಲಿ ಎನ್ಎಸ್ಎಸ್ ವತಿಯಿಂದ ನಡೆಯುವ ಎಲ್ಲಾ ಕಾರ್ಯಕ್ರಮಗಳಲ್ಲಿ ಸಕ್ರಿಯವಾಗಿ ಭಾಗವಹಿಸುವಂತೆ ತಿಳಿಸಿದರು.
ಕಾಲೇಜಿನ ಹಿರಿಯ ಉಪನ್ಯಾಸಕರಾದ ಶ್ರೀಮತಿ ಯಶೋಧ,ನಿಕಟಪೂರ್ವ ಕಾರ್ಯಕ್ರಮಾಧಿಕಾರಿಯಾಗಿದ್ದ ಶ್ರೀಮತಿ ಚೇತನ,ಎನ್ಎಸ್ಎಸ್ ವಿದ್ಯಾರ್ಥಿ ನಾಯಕಿಯರಾದ ಕುಮಾರಿ ,ಅನ್ನ ಮರಿಯ ಹಾಗೂ ಸವಿತಾ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಕಾರ್ಯಕ್ರಮ ಸಂಯೋಜಕರಾದ ಶ್ರೀಮತಿ ಪ್ರವೀಣ ಕಾರ್ಡುಜ ಪ್ರಾಸ್ತಾವಿಕ ಮಾತುಗಳಾಡಿದರು. ಉಪನ್ಯಾಸಕರಾದ ಶ್ರೀ ಸಂತೋಷ್ ಇವರ ಸ್ವಾಗತಿಸಿ,ವಿದ್ಯಾರ್ಥಿನಿ ಕುಮಾರಿ ಐಶ್ವರ್ಯ ಇವರು ವಂದಿಸಿದರು, ಕುಮಾರಿ ಲೋಕೇಶ್ವರಿ ಕಾರ್ಯಕ್ರಮ ನಿರೂಪಿಸಿದರು.