ಕುಂದಾಪುರ, 08 ಮಾರ್ಚ್ 2025: ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವಾಣಿಜ್ಯ ವಿಭಾಗದ ಆಶ್ರಯದಲ್ಲಿ ಬ್ಯಾಂಕಿಂಗ್ ತರಬೇತಿ ಉದ್ಘಾಟನಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ನರೇನ್ ಅಕಾಡೆಮಿ ಬ್ರಹ್ಮಾವರ ಇದರ ಸಂಸ್ಥಾಪಕರಾದ ಶ್ರೀ ಚಂದ್ರಕಾಂತ್ ವಿ. ಕಾರ್ಯಕ್ರಮವನ್ನು ಉದ್ಘಾಟಿಸಿ, ವಿದ್ಯಾರ್ಥಿಗಳಿಗೆ ಶುಭಹಾರೈಸಿದರು.
ಬ್ಯಾಂಕಿಂಗ್ ಕ್ಷೇತ್ರದಲ್ಲಿ ಅಗಾಧವಾದ ಉದ್ಯೋಗಾವಕಾಶಗಳಿದ್ದು, ವಿದ್ಯಾರ್ಥಿಗಳು ಸೂಕ್ತವಾದ ತರಬೇತಿಯ ಮೂಲಕ ಕೌಶಲ್ಯವನ್ನು ಹೆಚ್ಚಿಸಿಕೊಂಡು ಉದ್ಯೋಗವನ್ನು ಪಡೆಯುವಂತಾಗಬೇಕೆಂದು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ಕೆ. ಉಮೇಶ್ ಶೆಟ್ಟಿ ಹೇಳಿದರು.
ಉಪ-ಪ್ರಾಂಶುಪಾಲರಾದ ಡಾ| ಚೇತನ್ ಶೆಟ್ಟಿ ಕೋವಾಡಿ ಪ್ರಾಸ್ತಾವಿಕ ನುಡಿಗಳನ್ನಾಡಿದರು. ವಾಣಿಜ್ಯ ವಿಭಾಗದ ಮುಖ್ಯಸ್ಥರಾದ ಶ್ರೀಮತಿ ವೀಣಾ ಭಟ್ ಸ್ವಾಗತಿಸಿದರು. ಕಾರ್ಯಕ್ರಮ ಸಂಯೋಜಕರಾದ ಶ್ರೀ ಸುಧೀರ್ ಕುಮಾರ್ ವಂದಿಸಿದರು. ವಾಣಿಜ್ಯ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಶ್ವೇತಾ ಭಂಡಾರಿ ಕಾರ್ಯಕ್ರಮ ನಿರೂಪಿಸಿದರು.