ಕುಂದಾಪುರ 23 ಎಪ್ರಿಲ್ 2025: ಅಲ್ಮಾಸನ್ಸ್ ಟೆಕ್ನೋಲಾಜಿಸ್, ಮಂಗಳೂರು ಸಂಸ್ಥೆಯು ಕುಂದಾಪುರದ ಡಾ| ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಕ್ಯಾಂಪಸ್ ನೇಮಕಾತಿ ಕಾರ್ಯಕ್ರಮವನ್ನು ನಡೆಸಿತು.
ಎನ್‌ಐಟಿ ಮಂಗಳೂರು ಕೇಂದ್ರದ ಮುಖ್ಯಸ್ಥೆ ಶ್ರೀಮತಿ ಪವಿತ್ರಾ ಅವರು ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು. ನೇಮಕಾತಿ ಪ್ರಕ್ರಿಯೆಯ ಸಂದರ್ಭದಲ್ಲಿ ಅಲ್ಮಾಸನ್ಸ್ ಟೆಕ್ನೋಲಾಜೀಸ್ನ ಊಖ ಅಧಿಕಾರಿ ಅವರು ಕಂಪನಿಯ ಮಾಹಿತಿಯು ಸೇರಿದಂತೆ ಉದ್ಯೋಗದ ಬಗ್ಗೆ ವಿದ್ಯಾರ್ಥಿಗಳಿಗೆ ವಿವರ ನೀಡಿದರು. ಐಸಿಐಐಸಿಐ ಸಂಸ್ಥೆಯನ್ನು ಪ್ರತಿನಿಧಿಸಿದ ಶ್ರೀಮತಿ ಶ್ರಿನಿಧಿ ಮತ್ತು ಅಲ್ಮಾಸನ್ಸ್ ಟೆಕ್ನೋಲಾಜೀಸ್ನ ಪ್ರತಿನಿಧಿಯಾಗಿ ಶ್ರೀಮತಿ ಶಿಲ್ಪಾ ಉಪಸ್ಥಿತರಿದ್ದರು.
ಕಾಲೇಜಿನ ಉಪ ಪ್ರಾಂಶಪಾಲ ಡಾ. ಚೇತನ್ ಶೆಟ್ಟಿ ಕೋವಾಡಿ ಅಧ್ಯಕ್ಷತೆ ವಹಿಸಿದ್ದರು. ಕಾಲೇಜಿನ ಪ್ಲೇಸ್ಮೆಂಟ್ ಅಧಿಕಾರಿ ಶ್ರೀ ತಿಮ್ಮಪ್ಪ ಡಿ.ಎಸ್. ಅತಿಥಿಗಳನ್ನು ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.
ನೇಮಕಾತಿ ಪ್ರಕ್ರಿಯೆಯಲ್ಲಿ ಒಟ್ಟು 60 ವಿದ್ಯಾರ್ಥಿಗಳು ಶಾರ್ಟ್ಲಿಸ್ಟ್ ಆಗಿದ್ದಾರೆ. ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ಕೆ. ಉಮೇಶ್ ಶೆಟ್ಟಿ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಶುಭಾಶಯ ಕೋರಿದರು.