ಕುಂದಾಪುರ, ಅಕ್ಟೋಬರ್ 09, 2024: ಕುಂದಗನ್ನಡ ಸಮೃದ್ಧವಾದ ಭಾಷೆ. ಈ ಭಾಷೆಯೊಂದಿಗೆ ಬೆಸೆದುಕೊಂಡ ಸಂಸ್ಕೃತಿ ಉಳಿಯುವಂತಾಗಬೇಕಾದರೆ ಶಾಲಾ-ಕಾಲೇಜುಗಳ ಪಠ್ಯಕ್ರಮದಲ್ಲಿಯೂ ಈ ಭಾಷೆಯನ್ನು ಅಳವಡಿಸುವಂತಾಗಬೇಕು ಮತ್ತು ಭಾಷೆಯನ್ನು ಬಳಸಿದಾಗ ಮಾತ್ರ ಅದು ಉಳಿಯಲು ಸಾಧ್ಯ ಎಂದು ಕುಂದಾಪುರದ ಹಿರಿಯ ನ್ಯಾಯವಾದಿಗಳು ಹಾಗೂ ಸಾಂಸ್ಕೃತಿಕ ಚಿಂತಕರಾದ ಶ್ರೀ ಎ.ಎಸ್.ಎನ್. ಹೆಬ್ಬಾರ್ ಹೇಳಿದರು.ಅವರು ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಕುಂದಗನ್ನಡ ಸಂಘದ ವಾರ್ಷಿಕ ಚಟುವಟಿಕೆಗಳನ್ನು ಉದ್ಘಾಟಿಸಿ ಮಾತನಾಡಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ಕೆ. ಉಮೇಶ್ ಶೆಟ್ಟಿ ಕುಂದಗನ್ನಡ ಭಾಷೆಯ ಅನನ್ಯತೆ ಮತ್ತು ಇಲ್ಲಿನ ಸಂಸ್ಕೃತಿಯ ಅಸ್ಮಿತೆಯನ್ನು ಉಳಿಸುವುದು ವಿದ್ಯಾರ್ಥಿಗಳ ಆದ್ಯ ಕರ್ತವ್ಯ ಎಂದರು.ಉಪ-ಪ್ರಾಂಶುಪಾಲರಾದ ಡಾ| ಚೇತನ್ ಶೆಟ್ಟಿ ಕೋವಾಡಿ ಪ್ರಾಸ್ತಾವಿಸಿದರು.

ಕುಂದಗನ್ನಡ ಸಂಘದ ಸಂಯೋಜಕರಾದ ಶ್ರೀಮತಿ ರೇಷ್ಮಾ ಶೆಟ್ಟಿ ಮತ್ತು ಶ್ರೀಮತಿ ಪ್ರವೀಣಾ ಮಹಾಬಲ ಪೂಜಾರಿ ಉಪಸ್ಥಿತರಿದ್ದರು.ವಿದ್ಯಾರ್ಥಿಗಳಾದ ಅಶ್ಮಿತಾ ಸ್ವಾಗತಿಸಿ, ವಿಸ್ಮಿತಾ ಅತಿಥಿಗಳನ್ನು ಪರಿಚಯಿಸಿ, ಗಗನ್ ವಂದಿಸಿ, ಸ್ವಾತಿ ಕಾರ್ಯಕ್ರಮ ನಿರೂಪಿಸಿದರು.

Leave a Reply

Your email address will not be published. Required fields are marked *

You May Also Like

ಎಲ್.ಸಿ.ಆರ್ ಇಂಡಿಯನ್ ಪದವಿ ಕಾಲೇಜು ಕಕ್ಯಪದವು 100% ಫಲಿತಾಂಶ

ಕಕ್ಯಪದವು : ಎಲ್.ಸಿ.ಆರ್ ವಿದ್ಯಾಸಂಸ್ಥೆಯ 2023-24 ನೇ ಶೈಕ್ಷಣಿಕ ಸಾಲಿನ ( NEP ) ಮಂಗಳೂರು…

Local Talent Shines Bright: Trisha from Belthangady Selected for DKD Reality Show

Ms. Trisha, talented daughter of Mr. Prashant and Mrs. Shailaja, Guruvayanakere, has…

St. Joseph’s P U College, Bajpe Hosts Students’ Council Inauguration and Investiture Program

Bajpe, 23 June 2025: St. Joseph’s P U College, Bajpe held the…

ಗಾಯನ ಸ್ಪರ್ಧೆಯಲ್ಲಿ ಎಲ್ ಸಿ ಆರ್ ಸಂಸ್ಥೆಯ ವಿದ್ಯಾರ್ಥಿಗಳ ಸಾಧನೆ 

ಇರ್ವತ್ತೂರು, ಆಗಸ್ಟ್ 16, 2024 : ಇರ್ವತ್ತೂರು ಗ್ರಾಮ ಪಂಚಾಯತ್ ನಲ್ಲಿ ಭಾರತ್ ಸ್ಕೌಟ್ಸ್ ಮತ್ತು…