ಕುಂದಾಪುರ, ಅಕ್ಟೋಬರ್ 09, 2024: ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಪ್ರಾಂಗಣದಲ್ಲಿರುವ ಸರಸ್ವತಿ ದೇವರ ಮೂರ್ತಿಗೆ ಪೂಜೆ ಸಲ್ಲಿಸಿ, ಗ್ರಂಥಾಲಯದಲ್ಲಿ ಶಾರದಾ ಪೂಜೆ ಕಾರ್ಯಕ್ರಮವನ್ನು ಭಜನಾ ಕೀರ್ತನೆಯ ಮೂಲಕ ಅಕ್ಟೋಬರ್ 09ರಂದು ಆಚರಿಸಲಾಯಿತು. ಕಾಲೇಜಿನ ಗಣಕ ವಿಜ್ಞಾನ ವಿಭಾಗದ ಸಹ ಪ್ರಾಧ್ಯಾಪಕ ಶ್ರೀ ಗಿರಿರಾಜ್ ಭಟ್ ಪೂಜೆ ನೆರವೇರಿಸಿದರು.
ಈ ಸಂದರ್ಭ ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ಕೆ. ಉಮೇಶ್ ಶೆಟ್ಟಿ, ಉಪ-ಪ್ರಾಂಶುಪಾಲರಾದ ಡಾ| ಚೇತನ್ ಶೆಟ್ಟಿ ಕೋವಾಡಿ, ಮುಖ್ಯ ಗ್ರಂಥಪಾಲಕ ಶ್ರೀ ಮಹೇಶ್ ನಾಯ್ಕ್, ಬೋಧಕ-ಬೋಧಕೇತರ ವರ್ಗದವರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.