ಕುಂದಾಪುರ 01 ಮಾರ್ಚ್ 2025: ಡಾ| ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಗಣಕಶಾಸ್ತ್ರ ವಿಭಾಗದ ಆಶ್ರಯದಲ್ಲಿ ಪ್ರಾಧ್ಯಾಪಕರು ಹಾಗೂ ಸಿಬ್ಬಂದಿಗಳಿಗಾಗಿ ದಿನಾಂಕ 1 ಮಾರ್ಚ್ 2025ರಂದು ‘ಗಣಕ ವಿಜ್ಞಾನದಲ್ಲಿ ಇತ್ತೀಚಿನ ಪ್ರವೃತ್ತಿಗಳು’ ಎಂಬ ವಿಷಯದ ಕುರಿತು ಬೋಧಕ ಪುನಶ್ಚೇತನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ಅತಿಥಿಗಳಾದ IBM ನಲ್ಲಿ ಸಂಶೋಧಕರಾಗಿ ಕಾರ್ಯನಿರ್ವಹಿಸುತ್ತಿರುವ ಡಾ. ಕರಿನ್ ಮೂರ್ತಿಯವರು ” ಶಿಕ್ಷಕರು ವಿದ್ಯಾರ್ಥಿಗಳ ಅಭಿರುಚಿಗೆ ತಕ್ಕ ಹಾಗೆ ಆಧುನಿಕ ತಂತ್ರಜ್ಞಾನಗಳನ್ನು ಬಳಸಿಕೊಂಡು ಆಕರ್ಷಕವಾಗಿ ತರಗತಿಗಳನ್ನು ಮಾಡುವ ಕೌಶಲ್ಯವನ್ನು ವೃದ್ಧಿಸಿಕೊಳ್ಳಬೇಕು” ಎಂದರು.

ಗಣಕವಿಜ್ಞಾನ ವಿಭಾಗದ ಮುಖ್ಯಸ್ಥರಾದ ಶ್ರೀ ಮಹೇಶ್ ಕುಮಾರ್ ಪ್ರಾಸ್ತಾವಿಕ ನುಡಿಗಳನ್ನಾಡಿದರು. ಪ್ರಾಧ್ಯಾಪಕರು ಹಾಗೂ ಸಿಬ್ಬಂದಿಗಳಿಗೆ ಗಣಕ ವಿಜ್ಞಾನ ವಿಭಾಗದಲ್ಲಿ ಆಗುತ್ತಿರುವ ಇತ್ತೀಚಿಗಿನ ಬದಲಾವಣೆಗಳನ್ನು ಹೇಗೆ ಬಳಸಿಕೊಳ್ಳಬೇಕು, ವಿದ್ಯಾರ್ಥಿಗಳ ಅಭಿರುಚಿಗಳನ್ನು ಗುರುತಿಸಿ ವಿದ್ಯಾರ್ಥಿಗಳಲ್ಲಿ ಹೇಗೆ ಕಲಿಕೆಯಲ್ಲಿ ಆಸಕ್ತಿ ಹುಟ್ಟಿಸಬೇಕು ಎಂಬಿತ್ಯಾದಿ ವಿಷಯಗಳ ಕುರಿತಾಗಿ ಸಂಪೂರ್ಣ ಮಾಹಿತಿ ಹಾಗೂ ತರಬೇತಿಯನ್ನು ನೀಡಲಾಯಿತು.