ಕುಂದಾಪುರ, 11 ಮಾರ್ಚ್ 2025: ಜಿಲ್ಲಾ ಏಡ್ಸ್ ನಿಯಂತ್ರಣ ಹಾಗೂ ತಡೆಗಟ್ಟುವ ಘಟಕ ಇವರು ಉಡುಪಿ ಜಿಲ್ಲಾ ಅಂತರ್-ಕಾಲೇಜು ವಿದ್ಯಾರ್ಥಿಗಳಿಗಾಗಿ ಆಯೋಜಿಸಿದ ಹೆಚ್‌ಐವಿ/ಏಡ್ಸ್ ಕುರಿತ ಭಿತ್ತಿಚಿತ್ರ ಸ್ಪರ್ಧೆಯಲ್ಲಿ ಕುಂದಾಪುರದ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಎನ್.ಎಸ್.ಎಸ್. ಸ್ವಯಂಸೇವಕ ಮದನ್ ಎಮ್.ವಿ. ಪ್ರಥಮ ಸ್ಥಾನ ಪಡೆದಿರುತ್ತಾರೆ.
ಇವರಿಗೆ ಸಂಸ್ಥೆಯ ಅಧ್ಯಕ್ಷರಾದ ಶ್ರೀ ಬಿ.ಎಂ. ಸುಕುಮಾರ್ ಶೆಟ್ಟಿ, ಕಾಲೇಜು ಆಡಳಿತ ಮಂಡಳಿಯವರು, ಪ್ರಾಂಶುಪಾಲರಾದ ಪ್ರೊ| ಕೆ. ಉಮೇಶ್ ಶೆಟ್ಟಿ, ಎನ್.ಎಸ್.ಎಸ್. ಕಾರ್ಯಕ್ರಮಾಧಿಕಾರಿಗಳು, ಕಾಲೇಜಿನ ಬೋಧಕ-ಬೋಧಕೇತರ ವೃಂದ ಹಾಗೂ ವಿದ್ಯಾರ್ಥಿಗಳು ಅಭಿನಂದನೆ ಸಲ್ಲಿಸಿದ್ದಾರೆ.