ಕುಂದಾಪುರ 19 ಏಪ್ರಿಲ್ 2025: ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವಾಣಿಜ್ಯ ವಿಭಾಗದ ಆಶ್ರಯದಲ್ಲಿ ಫುಡ್ ಆರ್ಟ್ ಕಾರ್ಯಕ್ರಮ ಜರುಗಿತು.
ಕಾರ್ಯಕ್ರಮದ ಮುಖ್ಯ ಅತಿಥಿ ಹಾಗೂ ತೀರ್ಪುಗಾರರಾಗಿ ಆಗಮಿಸಿದ ಕುಂದಾಪುರದ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ಇಂಗ್ಲೀಷ್ ಉಪನ್ಯಾಸಕರಾದ ಶ್ರೀ ಸುಬ್ರಹ್ಮಣ್ಯ ಹೆಬ್ಬಾರ್ ಕಾರ್ಯಕ್ರಮವನ್ನು ಉದ್ದೇಶಿಸಿ ನೈಸರ್ಗಿಕ ಆಹಾರದ ಮಹತ್ವ ಹಾಗೂ ಅದರ ಉಪಯೋಗದಲ್ಲಿ ಆಹಾರದ ತಯಾರಿಕೆಯ ಬಗ್ಗೆ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಕಾಲೇಜಿನ ಉಪ-ಪ್ರಾಂಶುಪಾಲರಾದ ಡಾ| ಚೇತನ್ ಶೆಟ್ಟಿ ಕೋವಾಡಿ ಕಾಲೇಜು ವಿದ್ಯಾರ್ಥಿಗಳಿಗೆ ಆಹಾರ ಪದ್ಧತಿ ಮತ್ತು ಶ್ರಮ ಸಂಸ್ಕೃತಿಯ ಮಹತ್ವದ ಕುರಿತು ತಿಳಿಸಿದರು. ಕಾರ್ಯಕ್ರಮದ ಸಂಯೋಜಕರಾದ ಸತೀಶ್ ಕಾಂಚನ್ ಉಪಸ್ಥಿತರಿದ್ದರು.
ಕಾಲೇಜಿನ ವಾಣಿಜ್ಯ ವಿಭಾಗದ ಮುಖ್ಯಸ್ಥರಾದ ಶ್ರೀಮತಿ ವೀಣಾ ಭಟ್ ಸ್ವಾಗತಿಸಿದರು. ವಿದ್ಯಾರ್ಥಿಗಳಾದ ರಂಜನ್ ವಂದಿಸಿ, ಕಾವ್ಯ ನಿರೂಪಿಸಿದರು.