ಕುಂದಾಪುರ, 24 ಏಪ್ರಿಲ್ 2025: ಇಲ್ಲಿನ ಡಾ| ಬಿ .ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕ 1 ಮತ್ತು 2ರ ಆಶ್ರಯದಲ್ಲಿ ಅರಿವು-ಅರಿವು ಮುಖ್ಯ ಶೀರ್ಷಿಕೆಯಡಿಯಲ್ಲಿ ಎಚ್.ಐ.ವಿ./ಏಡ್ಸ್ ಕುರಿತು ಜಾಗೃತಿ ಕಾರ್ಯಕ್ರಮವನ್ನು ವಿದ್ಯಾರ್ಥಿಗಳಿಗೆ ಅರಿವು ಮೂಡಿಸುವ ನಿಟ್ಟಿನಲ್ಲಿ ಕಾಲೇಜಿನ ಮೂಕಾಂಬಿಕಾ ಸಭಾಂಗಣದಲ್ಲಿ ಆಯೋಜಿಸಲಾಯಿತು. 

 ಸಂಪನ್ಮೂಲ ವ್ಯಕ್ತಿ ಉಡುಪಿ ಜಿಲ್ಲಾ ಏಡ್ಸ್ ನಿಯಂತ್ರಣ ಮತ್ತು ತಡೆಗಟ್ಟುವ ಘಟಕದ ಮೇಲ್ವಿಚಾರಕರಾದ ಶ್ರೀ ಮಹಾಬಲೇಶ್ವರ್ ಅವರು ಮಾತನಾಡಿ, ಎಚ್.ಐ.ವಿ./ಏಡ್ಸ್ ಕೇವಲ ಆರೋಗ್ಯ ಸಮಸ್ಯೆಯಲ್ಲ, ಇದು ಒಂದು ಸಾಮಾಜಿಕವಾಗಿ ಪ್ರಭಾವ ಬೀರುವ ವಿಷಯ. ಈ ಬಗ್ಗೆ ಜನರಲ್ಲಿ ಇನ್ನೂ ಅಜ್ಞಾನ, ತಪ್ಪು ಕಲ್ಪನೆಗಳು ಹಾಗೂ ಭಯವಿದೆ. ಅದನ್ನು ನಿವಾರಿಸಲು ಜಾಗೃತಿ ಮತ್ತು ಸಹಾನುಭೂತಿ ಅಗತ್ಯ ಎಂದು ವಿವರಿಸಿದರು. 

ಇದೇ ಸಂದರ್ಭ ಅವರು ಎಚ್.ಐ.ವಿ./ಏಡ್ಸ್ ಹರಡುವ ಮಾರ್ಗ, ಸೋಂಕಿನಿಂದ ತಪ್ಪಿಸಿಕೊಳ್ಳುವ ಮಾರ್ಗಗಳು, ಚಿಕಿತ್ಸೆಯ ಲಭ್ಯತೆ ಹಾಗೂ ಸರ್ಕಾರದ ವಿವಿಧ ಸೌಲಭ್ಯಗಳ ಕುರಿತು ವಿದ್ಯಾರ್ಥಿಗಳಿಗೆ ಮಾಹಿತಿಯನ್ನು ನೀಡಿದರು. 

ಸಂಸ್ಥೆಯ ಪ್ರಾಂಶುಪಾಲರಾದ ಪ್ರೊ| ಕೆ. ಉಮೇಶ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಉಪ-ಪ್ರಾಂಶುಪಾಲ ಡಾ| ಚೇತನ್ ಶೆಟ್ಟಿ ಕೋವಾಡಿ ಸ್ವಾಗತಿಸಿ, ಪ್ರಸ್ತಾಪಿಸಿದರು. ಎನ್.ಎಸ್.ಎಸ್ ಸ್ವಯಂಸೇವಕಿ ಶ್ರೇಯಾ ಅತಿಥಿಗಳನ್ನು ಪರಿಚಯಿಸಿದರು. ಎನ್.ಎಸ್.ಎಸ್ ಘಟಕ 2ರ ಕಾರ್ಯಕ್ರಮಾಧಿಕಾರಿ ದೀಪಾ ಪೂಜಾರಿ ವಂದಿಸಿದರು. ಎನ್ .ಎಸ್.ಎಸ್ ಸ್ವಯಂ ಸೇವಕಿ ಪೃಥ್ವಿ  ಕಾರ್ಯಕ್ರಮ ನಿರೂಪಿಸಿ, ಶ್ರೀಶಾಂತ್  ಪ್ರಾರ್ಥಿಸಿದರು.

Leave a Reply

Your email address will not be published. Required fields are marked *

You May Also Like

ಎಲ್.ಸಿ.ಆರ್ ಇಂಡಿಯನ್ ಪದವಿ ಕಾಲೇಜು ಕಕ್ಯಪದವು 100% ಫಲಿತಾಂಶ

ಕಕ್ಯಪದವು : ಎಲ್.ಸಿ.ಆರ್ ವಿದ್ಯಾಸಂಸ್ಥೆಯ 2023-24 ನೇ ಶೈಕ್ಷಣಿಕ ಸಾಲಿನ ( NEP ) ಮಂಗಳೂರು…

Local Talent Shines Bright: Trisha from Belthangady Selected for DKD Reality Show

Ms. Trisha, talented daughter of Mr. Prashant and Mrs. Shailaja, Guruvayanakere, has…

St. Joseph’s P U College, Bajpe Hosts Students’ Council Inauguration and Investiture Program

Bajpe, 23 June 2025: St. Joseph’s P U College, Bajpe held the…

ಗಾಯನ ಸ್ಪರ್ಧೆಯಲ್ಲಿ ಎಲ್ ಸಿ ಆರ್ ಸಂಸ್ಥೆಯ ವಿದ್ಯಾರ್ಥಿಗಳ ಸಾಧನೆ 

ಇರ್ವತ್ತೂರು, ಆಗಸ್ಟ್ 16, 2024 : ಇರ್ವತ್ತೂರು ಗ್ರಾಮ ಪಂಚಾಯತ್ ನಲ್ಲಿ ಭಾರತ್ ಸ್ಕೌಟ್ಸ್ ಮತ್ತು…