ಕುಂದಾಪುರ (ಅಕ್ಟೋಬರ್ 25, 2024): ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜು ಇದರ ವ್ಯವಹಾರ ಆಡಳಿತ ವಿಭಾಗದ ಆಶ್ರಯದಲ್ಲಿ ಅಕ್ಟೋಬರ್ 24 ಹಾಗೂ 25ರಂದು ನಡೆದ ನೋವೇಶನ್ ಮ್ಯಾನೇಜ್ಮೆಂಟ್ ಫೆಸ್ಟ್ -2024 ಸಂಪನ್ನಗೊಂಡಿತು. ಮುಖ್ಯ ಅತಿಥಿಯಾಗಿ ಆಗಮಿಸಿದ ಇಂಡಿಯನ್ ಓವರ್ಸೀಸ್ ಬ್ಯಾಂಕ್ ಕುಂದಾಪುರ ಶಾಖೆಯ ಪ್ರಬಂಧಕರುಗಳಾದ ಶ್ರೀ ನಿಶಿತ್ ಪಾರ್ಮರ್ ಹಾಗೂ ಶ್ರೀ ರವಿ ಮುಖ್ಯ ಅತಿಥಿಗಳಾಗಿ ಆಗಮಿಸಿ ಕಾರ್ಯಕ್ರಮದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.
ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ಕೆ. ಉಮೇಶ್ ಶೆಟ್ಟಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ವಿಭಾಗದ ಪ್ರಾಧ್ಯಾಪಕರುಗಳಾದ ಅವಿತಾ ಕೊರೆಯಾ, ಹರೀಶ್ ಬಿ, ಪ್ರವೀಣ್ ಮೊಗವೀರ ಗಂಗೊಳ್ಳಿ, ಚೈತಾಲಿ ಉಪಸ್ಥಿತರಿದ್ದರು. ವ್ಯವಹಾರ ಆಡಳಿತ ವಿಭಾಗದ ಮುಖ್ಯಸ್ಥರಾದ ಶ್ರೀಮತಿ ನಂದಾ ರೈ ಸ್ವಾಗತಿಸಿದರು. ಕಾಲೇಜಿನ ಉಪ ಪ್ರಾಂಶುಪಾಲರಾದ ಡಾ| ಚೇತನ್ ಶೆಟ್ಟಿ ಕೋವಾಡಿ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಸಂಯೋಜಕರಾದ ರಜತ್ ಬಂಗೇರ ವಿಜೇತರ ಪಟ್ಟಿ ವಾಚಿಸಿದರು. ಟೀಮ್ ಪಯೋನಿಯರ್ ಸಮಗ್ರ ಚಾಂಪಿಯನ್ ಆಗಿ ಮೂಡಿಬಂತು. ಸಕ್ಸಸ್ ಸ್ಕ್ವಾಡ್ ತಂಡ ರನ್ನರ್ ಅಪ್ ಪ್ರಶಸ್ತಿ ಪಡೆದುಕೊಂಡಿತು. ವಿದ್ಯಾರ್ಥಿ ಪ್ರತಿನಿಧಿ ಕಿರಣ್ ಅತಿಥಿಗಳನ್ನು ಸಭೆಗೆ ಪರಿಚಯಿಸಿದರು. ಶ್ರದ್ಧಾ ಆರ್. ವಂದಿಸಿದರು. ವಿದ್ಯಾರ್ಥಿನಿ ಶ್ರೀರಕ್ಷಾ ನಿರೂಪಿಸಿದರು.