ಕುಂದಾಪುರ, 01 ಮೇ 2025: ಕಾಲೇಜಿನ ಬಿ.ಎಮ್. ಎಸ್. ಕ್ರೀಡಾಂಗಣದಲ್ಲಿ ಪ್ರತಿಭಾ ದಿನಾಚರಣೆ ‘ಸಂಭ್ರಮ’ವು ಆಕೃತಿಗೊಂಡಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಕೋಟ ವಿವೇಕ ಪದವಿ ಪೂರ್ವ ಕಾಲೇಜಿನ ಇಂಗ್ಲೀಷ್ ಉಪನ್ಯಾಸಕ ಶ್ರೀ ಶಿವಪ್ರಸಾದ್ ಶೆಟ್ಟಿಗಾರ್‌ರವರು ವಿದ್ಯಾರ್ಥಿಗಳು ಕೇವಲ ಪಠ್ಯಕ್ಕೆ ತಮ್ಮನ್ನು ಸೀಮಿತಗೊಳಿಸಿಕೊಳ್ಳದೆ ಪಠ್ಯೇತರ ಚಟುವಟಿಕೆಯಲ್ಲಿ ತಮ್ಮನ್ನು ತೊಡಗಿಸಿಕೊಂಡಾಗ ಮಾತ್ರ ಸರ್ವಾಂಗೀಣ ಅಭಿವೃದ್ಧಿಯನ್ನು ಕಾಣುವುದಕ್ಕೆ ಸಾಧ್ಯ, ಈ ಹಿನ್ನಲೆಯಲ್ಲಿ ಕಾಲೇಜು ನಿಮಗೆ ಒದಗಿಸುವ ಈ ವೇದಿಕೆಯನ್ನು ಸೂಕ್ಷ್ಮವಾಗಿ ಬಳಸಿಕೊಳ್ಳಬೇಕು ಎಂದರು.
ಅವರು ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಪ್ರತಿಭಾ ದಿನಾಚರಣೆ “ಸಂಭ್ರಮ”ವನ್ನು ಉದ್ಘಾಟಿಸಿ ಮಾತನಾಡಿದರು. ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ಕೆ. ಉಮೇಶ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು.
ಈ ಸಂದರ್ಭ ತೀರ್ಪುಗಾರರಾಗಿ ಆಗಮಿಸಿದ ವಡ್ಡರ್ಸೆಯ ಸರಕಾರಿ ಪ್ರೌಢ ಶಾಲಾ ಶಿಕ್ಷಕರಾದ ಶ್ರೀ ಆನಂದ ಶೆಟ್ಟಿ ಹಾಗೂ ಶಂಕರನಾರಾಯಣ ಮದರ್ ತೆರೇಸಾ ಪದವಿ ಪೂರ್ವ ಕಾಲೇಜಿನ ಉಪ-ಪ್ರಾಂಶುಪಾಲರಾದ ಗೀತಾ, ಕಾಲೇಜಿನ ಉಪ-ಪ್ರಾಂಶುಪಾಲರಾದ ಡಾ| ಚೇತನ್ ಶೆಟ್ಟಿ ಕೋವಾಡಿ ಉಪಸ್ಥಿತರಿದ್ದರು.
ಆಡಳಿತ ನಿಕಾಯಕರಾದ ರಕ್ಷಿತ್ ರಾವ್ ಗುಜ್ಜಾಡಿ ಸ್ವಾಗತಿಸಿ, ವಾಣಿಜ್ಯ ಉಪನ್ಯಾಸಕ ಸುಧೀರ್ ಕುಮಾರ್ ಅತಿಥಿಗಳನ್ನು ಪರಿಚಯಿಸಿ, ಐಕ್ಯೂಎಸಿ ಸಂಯೋಜಕಿ ಶ್ರೀಮತಿ ದೀಪಿಕಾ ಜಿ. ವಂದಿಸಿದರು. ಆಂಗ್ಲ ಭಾಷಾ ಉಪನ್ಯಾಸಕಿ ಶ್ರೀಮತಿ ಸ್ವಾತಿ ಜಿ. ರಾವ್ ನಿರೂಪಿಸಿದರು.