ಕುಂದಾಪುರ, 01 ಮಾರ್ಚ್ 2025: ಡಾ. ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಗಣಕ ವಿಜ್ಞಾನ ವಿಭಾಗದ ವತಿಯಿಂದ ಮಾರ್ಚ್ 1ರಂದು ಅಂತಿಮ ಬಿಸಿಎ ವಿದ್ಯಾರ್ಥಿಗಳಿಗೆ “UML ಬಳಸಿ ಕ್ಲಾಸ್ ಮಾದರೀಕರಣ” ಎಂಬ ತಾಂತ್ರಿಕ ವಿಷಯದ ಕುರಿತು ಒಂದು ದಿನದ ಮಾಹಿತಿ ಕಾರ್ಯಾಗಾರವನ್ನು ಆಯೋಜಿಸಲಾಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಕೆ. ಉಮೇಶ್ ಶೆಟ್ಟಿ ವಹಿಸಿದ್ದರು. ಕಾರ್ಯಾಗಾರದ ಸಂಪನ್ಮೂಲ ವ್ಯಕ್ತಿಗಳಾದ ಡಾ. ಸುದರ್ಶನ್ ಮೂರ್ತಿ ಮತ್ತು ಡಾ. ಕ್ಯಾರೆನ್ ಮೂರ್ತಿ ತಂತ್ರಜ್ಞಾನ ಬೆಳವಣಿಗೆಗೆ ತಕ್ಕಂತೆ ನಮ್ಮ ಜ್ಞಾನವನ್ನು ವಿಸ್ತರಿಸಿಕೊಳ್ಳುವುದು ಹಾಗೂ ನಿರಂತರ ಕಲಿಕೆಯ ಮನೋಭಾವನೆ ಅನಿವಾರ್ಯ ಎಂದು ತಿಳಿಸಿದರು.
ವಿಭಾಗದ ಮುಖ್ಯಸ್ಥರಾದ ಶ್ರೀ ಮಹೇಶ್ ಕುಮಾರ್ ಪ್ರಾಸ್ತಾವಿಕ ನುಡಿಗಳನ್ನಾಡಿದರು. ವಿಭಾಗದ ಪ್ರಾಧ್ಯಾಪಕರಾದ ಮೇಘ ಸ್ವಾಗತಿಸಿದರು. ಶ್ರೀಮತಿ ಪವಿತ್ರಾ ಶೆಟ್ಟಿ ಮತ್ತು ನಿರ್ಮಲ ಅತಿಥಿಗಳನ್ನು ಪರಿಚಯಿಸಿದರು. ಶ್ರೀಮತಿ ವಿಲ್ಮಾ ವಂದಿಸಿದರು ಮತ್ತು ಶ್ರೀ ಪ್ರಣಾಮ್ ಆರ್. ಕಾರ್ಯಕ್ರಮವನ್ನು ನಿರೂಪಿಸಿದರು.