ಕುಂದಾಪುರ, 25 ಮಾರ್ಚ್ 2025: ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಕನ್ನಡ ಸಂಘದ ವಿದ್ಯಾರ್ಥಿಗಳು ಉಪ್ಪುಂದದ ಶಂಕರ ಕಲಾಮಂದಿರದಲ್ಲಿರುವ ಕುಂದ ಅಧ್ಯಯನ ಕೇಂದ್ರಕ್ಕೆ ಭೇಟಿ ನೀಡಿದರು.
ಕುಂದ ಅಧ್ಯಯನ ಕೇಂದ್ರದ ಸಂಸ್ಥಾಪಕರು, ಸಾಂಸ್ಕೃತಿಕ ಚಿಂತಕರಾದ ಉಪ್ಪುಂದ ಚಂದ್ರಶೇಖರ ಹೊಳ್ಳ ಅವರು ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿ, ವಿದ್ಯಾರ್ಥಿಗಳು ಪ್ರಕೃತಿಯನ್ನು ಆಸ್ವಾದಿಸುವ ಸೌಂದರ್ಯ ಪ್ರಜ್ಞೆಯನ್ನು ಬೆಳೆಸಿಕೊಳ್ಳಬೇಕು . ಜೊತೆಗೆ ಅಧ್ಯಯನ ಆಸಕ್ತಿಯನ್ನು ಬೆಳೆಸಿಕೊಂಡರೆ ಭವಿಷ್ಯದಲ್ಲಿ ಉತ್ತಮ ಪ್ರಜೆಗಳಾಗಲು ಸಾಧ್ಯ ಎಂದರು. ಇದೇ ಸಂದರ್ಭ ಅಧ್ಯಯನ ಕೇಂದ್ರದಲ್ಲಿರುವ ವಿವಿಧ ಪುಸ್ತಕಗಳ ಕುರಿತು ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು.
ಶಿಕ್ಷಕ ಗಣಪತಿ ಹೋಬಳಿದಾರ ಅವರು ಶಂಕರ ಕಲಾಮಂದಿರದಲ್ಲಿರುವ ಪ್ರಾಚ್ಯ ವಸ್ತುಗಳ ಕುರಿತು ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು.
ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಕೆ. ಉಮೇಶ್ ಶೆಟ್ಟಿ ಕಾರ್ಯಕ್ರಮ ಸಂಯೋಜಿಸಿದರು. ಉಪ ಪ್ರಾಂಶುಪಾಲ ಡಾ| ಚೇತನ್ ಶೆಟ್ಟಿ ಕೋವಾಡಿ ಪ್ರಾಸ್ತಾವಿಕ ಮಾತುಗಳನ್ನು ಆಡಿದರು. ಈ ಸಂದರ್ಭ ಶ್ರೀ ಗಣೇಶ್ ಪ್ರಸಾದ್ ಮಯ್ಯ, ಶಿಕ್ಷಕಿ ಜ್ಯೋತಿ, ಕನ್ನಡ ಸಂಘದ ಸಂಯೋಜಕರಾದ ಸುಕುಮಾರ್ ಶೆಟ್ಟಿ ಕಮಲಶಿಲೆ, ಶ್ವೇತಾ ಹಾಗೂ ಕಚೇರಿ ಸಿಬ್ಬಂದಿ ಚಂದ್ರಶೇಖರ್ ಶೆಟ್ಟಿಯವರು ಉಪಸ್ಥಿತರಿದ್ದರು.