ಕುಂದಾಪುರ, 05 ಮಾರ್ಚ್ 2025: ರಾಷ್ಟ್ರಕವಿ ಗೋವಿಂದ ಪೈ ಸಂಶೋಧನಾ ಕೇಂದ್ರವು ಅನೇಕ ಸಂಶೋಧನಾ ನಿರತ ವಿದ್ಯಾರ್ಥಿಗಳಿಗೆ ಸಹಕರಿಸುವುದರೊಂದಿಗೆ, ಕನ್ನಡ ಸಾರಸ್ವತ ಲೋಕಕ್ಕೆ ರಾಷ್ಟ್ರಕವಿ ಗೋವಿಂದ ಪೈಯವರ ಸಾಹಿತ್ಯ ಕೃತಿಗಳು ಅಪಾರ ಕೊಡುಗೆ ನೀಡಿವೆ ಎಂದು ಉಡುಪಿಯ ರಾಷ್ಟ್ರಕವಿ ಗೋವಿಂದ ಪೈ ಸಂಶೋಧನಾ ಕೇಂದ್ರದ ನಿರ್ದೇಶಕ ಡಾ| ಬಿ. ಜಗದೀಶ್ ಶೆಟ್ಟಿ ಹೇಳಿದರು.
ಇವರು ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಯಕ್ಷಗಾನ ಸಂಘವು ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ಕೆ. ಉಮೇಶ್ ಶೆಟ್ಟಿಯವರ ಮಾರ್ಗದರ್ಶನದಲ್ಲಿ ಹಮ್ಮಿಕೊಂಡ ವಿಸ್ತರಣಾ ಚಟುವಟಿಕೆಯ ಭಾಗವಾಗಿ ಆಯೋಜಿಸಿದ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಮಾತನಾಡಿದರು. ಈ ಸಂದರ್ಭ ಕನ್ನಡ ಕರಾವಳಿ ಭಾಗದ ಸಾಂಸ್ಕೃತಿಕ ಕಿರುಚಿತ್ರ ಪ್ರದರ್ಶಿಸಲಾಯಿತು. ಸಂಶೋಧನ ಕೇಂದ್ರದ ಡಾ| ಅರುಣ್ ಕುಮಾರ್, ಕಾಲೇಜಿನ ಆಡಳಿತ ನಿಕಾಯಕರು ಮತ್ತು ಯಕ್ಷಗಾನ ಸಂಘದ ಸಂಯೋಜಕರಾದ ಶ್ರೀ ರಕ್ಷಿತ್ ರಾವ್ ಗುಜ್ಜಾಡಿ, ಶ್ರೀ ಸುಹಾಸ್ ಜಟ್ಟಿಮನೆ, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.