ಕುಂದಾಪುರ, 11 ಏಪ್ರಿಲ್ 2025: ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವಾಣಿಜ್ಯ ವಿಭಾಗದ ಆಶ್ರಯದಲ್ಲಿ ಸಿಎ/ಸಿಎಸ್/ಸಿಎಂಎ ವಿದ್ಯಾರ್ಥಿಗಳಿಗೆ ಪರೀಕ್ಷಾ ಪೂರ್ವ ತಯಾರಿ ಕುರಿತಾಗಿ ಮಾಹಿತಿ ಕಾರ್ಯಾಗಾರ ನಡೆಸಲಾಯಿತು.
ಕಾಲೇಜಿನ ಪ್ರಾಕ್ತನ ವಿದ್ಯಾರ್ಥಿಗಳಾದ ವಿನೋಲ್ ಡಿಸೋಜಾ ಹಾಗೂ ನಾದಶ್ರೀ ಇವರು ವಿಭಿನ್ನ ಪ್ರಾಯೋಗಿಕ ಚಟುವಟಿಕೆಗಳ ಮೂಲಕ ಪರೀಕ್ಷೆಯಲ್ಲಿ ಸಮಯ ನಿರ್ವಹಣೆ ಹಾಗೂ ಪರೀಕ್ಷಾ ಪೂರ್ವ ತಯಾರಿ ನಡೆಸುವ ಕುರಿತು ಅರಿವು ಮೂಡಿಸಿದರು.
ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ಕೆ. ಉಮೇಶ್ ಶೆಟ್ಟಿ, ಉಪ-ಪ್ರಾಂಶುಪಾಲರಾದ ಚೇತನ್ ಶೆಟ್ಟಿ ಕೋವಾಡಿ ಕಾರ್ಯಕ್ರಮ ಆಯೋಜಿಸದರು.
ಕಾಲೇಜಿನ ವಾಣಿಜ್ಯ ವಿಭಾಗದ ಮುಖ್ಯಸ್ಥರಾದ ಶ್ರೀಮತಿ ವೀಣಾ ವಿ. ಭಟ್ ಅವರು ಪ್ರೊಫೆಷನಲ್ ವಿಧ್ಯಾರ್ಥಿಗಳಿಗೆ ಪರೀಕ್ಷೆಯ ಸಮಯದಲ್ಲಿ ಮಾನಸಿಕ ಸಿದ್ಧತೆ ಹಾಗೂ ಸಮಯ ನಿರ್ವಹಣೆ ಬಹಳ ಪ್ರಾಮುಖ್ಯತೆಯನ್ನು ಪಡೆಯುತ್ತದೆ. ಈ ನಿಟ್ಟಿನಲ್ಲಿ ಎಲ್ಲ ವಿದ್ಯಾರ್ಥಿಗಳು ಕಾರ್ಯಾಗಾರದ ಸದುಪಯೋಗಪಡಿಸಿಕೊಳ್ಳಬೇಕೆಂದು ಶುಭಾಶಂಸನೆ ಮಾತುಗಳನ್ನಾಡಿದರು. ಕಾರ್ಯಕ್ರಮ ಸಂಯೋಜಕರಾದ ಶ್ವೇತ ಭಂಡಾರಿ ಹಾಗೂ ಪ್ರಾಕ್ತನ ವಿದ್ಯಾರ್ಥಿಗಳ ಸಂಘ ಇದರ ಖಜಾಂಚಿಯಾದ ಯೋಗೀಶ ಶಾನುಭೋಗ್ ಹಾಗೂ ಕಾರ್ಯದರ್ಶಿಯಾದ ದೀಪಾ ಪೂಜಾರಿ ಉಪಸ್ಥಿತರಿದ್ದರು. ಕಾಲೇಜಿನ ಸಿಎ/ಸಿಎಸ್/ಸಿಎಂಎ ಸಂಘದ ಸಂಯೋಜಕರಾದ ಸುಹಾಸ್ ಜಟ್ಟಿಮನೆ ನಿರೂಪಿಸಿದರು.