ಮೂಡಬಿದ್ರಿ, ಆಗಸ್ಟ್ 08, 2024 : ಯೆನೆಪೋಯ ಕಾಲೇಜು ತೋಡಾರು ಇಲ್ಲಿನ ಬಿಸಿಎ ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಓರಿಯಂಟೇಶನ್ ಕಾರ್ಯಕ್ರಮವನ್ನು ಗುರುವಾರ ಹಮ್ಮಿಕೊಳ್ಳಲಾಗಿತ್ತು.
ಮೂಡಬಿದ್ರಿಯ ಶ್ರೀ ಮಹಾವೀರ ಕಾಲೇಜಿನ ಪ್ರಾಂಶುಪಾಲರಾದ ಡಾ. ರಾಧಾಕೃಷ್ಣ ಶೆಟ್ಟಿಯವರು ಮುಖ್ಯ ಅತಿಥಿಯಾಗಿ ಆಗಮಿಸಿ, ಕಾರ್ಯಕ್ರಮವನ್ನು ಉದ್ಘಾಟಿಸಿ, ವಿದ್ಯಾರ್ಥಿಗಳಿಗೆ ಕೌಶಲ್ಯಗಳ ಕುರಿತು ಮಾಹಿತಿಯನ್ನು ನೀಡಿ, ಬದುಕಿನ ಯಶಸ್ಸಿಗೆ ಬೇಕಾದಂತಹ ವಿಚಾರಗಳನ್ನು ತಿಳಿಸಿದರು. ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಹರೀಶ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಸಂಸ್ಥೆಯ ಆಡಳಿತಾಧಿಕಾರಿ ಮೊಹಮ್ಮದ್ ಬಿ. ಶಾಹಿದ್ ಉಪಸ್ಥಿತರಿದ್ದರು.
ಸಹಾಯಕ ಪ್ರಾಧ್ಯಾಪಕರಾದ ಕು.ಪಲ್ಲವಿ ನಿರೂಪಿಸಿ, ಕು. ಅಶ್ವಿನಿ ಅತಿಥಿಗಳನ್ನು ಪರಿಚಯಿಸಿದರು ಹಾಗೂ ಶ್ರೀ ರೋಶನ್ ಮೆಲ್ವಿನ್ ಡಿಸೋಜಾರವರು ವಂದಿಸಿದರು.
1 comment
Wowww nice????