ಕೃಷ್ಣಾಪುರ, 14 ನವೆಂಬರ್ 2025: ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆ ಕಾಟಿಪಳ್ಳ, ಕೃಷ್ಣಾಪುರ ಇಲ್ಲಿ ಮಕ್ಕಳ ದಿನಾಚರಣೆಯ ಅಂಗವಾಗಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.
ಮಕ್ಕಳ ದಿನಾಚರಣೆಯ ಅಂಗವಾಗಿ ಮಕ್ಕಳಿಗೆ ವಿವಿಧ ಆಟೋಟ ಸ್ಪರ್ಧೆಯನ್ನು ಏರ್ಪಡಿಸಲಾಗಿತ್ತು. ಮಕ್ಕಳು ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನೀಡಿದರು. ಅಲ್ಲಿ ನೆರೆದಿದ್ದ ಪೋಷಕರಿಗೂ ಆಟಗಳನ್ನು ಆಡಿಸಿದರು. ಶಾಲಾ ನಾಯಕಿ ಮಕ್ಕಳ ದಿನಾಚರಣೆಯ ಮಹತ್ವದ ಕುರಿತು ಮಾತನಾಡಿದಳು.ವಿಜೇತರಿಗೆ ಬಹುಮಾನ ವಿತರಿಸಲಾಯಿತು.
ಈ ಕಾರ್ಯಕ್ರಮದಲ್ಲಿ ಶಾಲಾ ನಾಯಕಿ, ಉಪನಾಯಕ, ಶಿಕ್ಷಕ ವೃಂದ,SDMC ಸದಸ್ಯರು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಕೊನೆಗೆ ವಿದ್ಯಾರ್ಥಿಗಳಿಗೆ ಸಿಹಿಯನ್ನು ಹಂಚಲಾಯಿತು.ಮಕ್ಕಳ ದಿನಾಚರಣೆಯ ಸಂದರ್ಭದಲ್ಲಿ ಶಾಲಾ ಆವರಣವೇ ಸಂತೋಷ ಮತ್ತು ಸಂಭ್ರಮದಿಂದ ತುಂಬಿ ತುಳುಕಿತು.