ಕಕ್ಯಪದವು, ಸೆಪ್ಟೆಂಬರ್ 6, 2024: ವಿದ್ಯಾರ್ಥಿಗಳಿಗೆ ಸಾಮಾಜಿಕ ಜಾಲತಾಣದ ಅನುಕೂಲ ಹಾಗೂ ಅನಾನುಕೂಲ ಕುರಿತು ಅರಿವು ಮೂಡಿಸುವ ಸಲುವಾಗಿ ಎಲ್. ಸಿ. ಆರ್ ಇಂಡಿಯನ್ ಪದವಿ ಪೂರ್ವ ಕಾಲೇಜಿನಲ್ಲಿ “ಸಾಮಾಜಿಕ ಜಾಲತಾಣದ ಅನುಕೂಲ ಹಾಗೂ ಅನಾನುಕೂಲ” ಕುರಿತು ಚರ್ಚಾ ಗೋಷ್ಠಿಯನ್ನು ನಡೆಸಲಾಯಿತು.
ಸಂಸ್ಥೆಯ ಪ್ರಾಂಶುಪಾಲರಾದ ಜೋಸ್ಟನ್ ಲೋಬೋ, ಸಂಯೋಜಕರಾದ ಯಶವಂತ್ ಜಿ ನಾಯಕ್, ಪದವಿ ಪೂರ್ವ ವಿಭಾಗದ ಮುಖ್ಯಸ್ಥೆಯಾದ ಸೌಮ್ಯ ಹಾಗೂ ಉಪನ್ಯಾಸಕರು ಉಪಸ್ಥಿತರಿದ್ದರು.ಪದವಿ ಪೂರ್ವ ವಿಭಾಗದ ಮುಖ್ಯಸ್ಥೆಯಾದ ಸೌಮ್ಯ ಕಾರ್ಯಕ್ರಮ ನಿರೂಪಿಸಿದರು .