ಪುತ್ತೂರು, 28 ಜನವರಿ 2025: ಸುದಾನವಸತಿ ಶಾಲೆಯಲ್ಲಿ ಪುತ್ತೂರಿನ ಜೆ ಸಿ ಐ ಬಾರ್ ಅಸೋಸಿಯೇಶನ್ ವಕೀಲರ ಸಂಘ ವತಿಯಿಂದ ಮಾದಕ ವಸ್ತುಗಳ ಜಾಗೃತಿ- ಡ್ರಗ್ಸ್ ಫ್ರೀ ಸಿಟಿ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.

ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿದ್ದ ಸ್ವಾತಿ ಜೆ ರೈ ಮತ್ತು ಪ್ರತಿಮಾ ರೈ ಡ್ರಗ್ಸ್ ಸೇವನೆಯ ದುಷ್ಪರಿಣಾಮಗಳ ಬಗೆಗೆ ವಿವರಿಸಿದರು. ಎಂಟು ಮತ್ತು ಒಂಬತ್ತನೇ ತರಗತಿಯ ವಿದ್ಯಾರ್ಥಿಗಳೊಂದಿಗೆ ಸಂವಾದ ಕಾರ್ಯಕ್ರಮವು ನಡೆಯಿತು.

ಶಾಲಾ ಮುಖ್ಯ ಶಿಕ್ಷಕಿ ಶ್ರೀಮತಿ ಶೋಭಾನಾಗರಾಜ್ ಉಪಸ್ಥಿತರಿದ್ದರು. ಸಹಶಿಕ್ಷಕಿ ಶ್ರೀಮತಿ ನಿಶ್ಮಿತಾಕಾರ್ಯಕ್ರಮವನ್ನು ನಿರೂಪಿಸಿದರು. ಶಾಲೆಯ ಸೋಶಿಯಲ್ ಕ್ಲಬ್ ಜಾಗೃತಿ ಈ ಕಾರ್ಯಕ್ರಮವನ್ನು ಆಯೋಜಿಸಿತ್ತು.