ಮಧುವನ, 5 ಡಿಸೆಂಬರ್ 2024: ಇಲ್ಲಿನ ಇಸಿಆರ್ ಇನ್ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್ ಸ್ಟಡೀಸ್ ನಲ್ಲಿರುವ ರೆಡ್ ಕ್ರಾಸ್ ಘಟಕದ ವತಿಯಿಂದ ಏಡ್ಸ್ ಜಾಗೃತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.ಕಾರ್ಯಕ್ರಮ ಅಧಿಕಾರಿಯಾದ ಶ್ರೀಮತಿ ಕುಸುಮಾವತಿ ಕಾರ್ಯಕ್ರಮವನ್ನು ಆಯೋಜಿಸಿದ್ದರು.
ಸಂಪನ್ಮೂಲ ವ್ಯಕ್ತಿಗಳಾಗಿ ಕೆನರಾ ಕಾಲೇಜ್ ಆಫ್ ನರ್ಸಿಂಗ್ ಕಾಲೇಜಿನ ಉಪನ್ಯಾಸಕಿಯಾದ ಕುಮಾರಿ ತುಳಸಿ ಭಾಗವಹಿಸಿ ವಿದ್ಯಾರ್ಥಿಗಳಿಗೆ ಏಡ್ಸ್ ಕುರಿತು ಜಾಗೃತಿಯನ್ನು ಮೂಡಿಸಿದರು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಪ್ರಾಂಶುಪಾಲರಾದ ಡಾಕ್ಟರ್ ಅಶೋಕ ಜೋಗಿ ಅವರು ಏಡ್ಸ್ ಬಗ್ಗೆ ವಿದ್ಯಾರ್ಥಿಗಳು ಜನಸಾಮಾನ್ಯರಲ್ಲಿ ಅರಿವು ಮೂಡಿಸಬೇಕು ಎಂದು ವಿದ್ಯಾರ್ಥಿಗಳನ್ನುದ್ದೇಶಿಸಿ ಮಾತನಾಡಿದರು. ಕುಮಾರಿ ವೀಣಾ ನಿರೂಪಿಸಿದರೆ ಕುಮಾರಿ ನಿಶಾ ಸ್ವಾಗತ ಕೋರಿದರು ಹಾಗೂ ಕುಮಾರಿ ವೀಣಾ ಪೂಜಾರಿ ವಂದಿಸಿದರು.