ಬಜಪೆ, 14 ಜೂನ್ 2025: ಸಂತ ಜೋಸೆಫರ ಪದವಿಪೂರ್ವ ಕಾಲೇಜು, ಬಜಪೆ ಇಲ್ಲಿ ದ್ವಿತೀಯ ಪಿಯುಸಿ ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ ಮತ್ತು ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ಹಾಗೂ ಪೋಷಕರಿಗೆ ನವಜ್ನಾನ ವಿಕಸನ (orientation) ಕಾರ್ಯಕ್ರಮಗಳು ಕಾಲೇಜಿನ ಸಭಾಂಗಣದಲ್ಲಿ ನಡೆದವು.
ಸಂಸ್ಥೆಯ ಸಂಚಾಲಕರಾದ ವಂದನೀಯ ಆಂಡ್ರ್ಯೂ ಡಿಸೋಜ ಅಧ್ಯಕ್ಷತೆ ವಹಿಸಿದ್ದರು. ಕಿರಿಯ ವಿದ್ಯಾರ್ಥಿಗಳು ಸಾಧಕ ವಿದ್ಯಾರ್ಥಿಗಳಿಂದ ಪ್ರೇರಣೆ ಪಡೆದು ಮುನ್ನಡೆಯುವಂತೆ ಕರೆ ನೀಡಿದರು.
ಮುಖ್ಯ ಅತಿಥಿಯಾಗಿ ಮಂಗಳೂರಿನ ಸ್ವಸ್ತಿಕ್ ಇಂಟರ್ನ್ಯಾಷನಲ್ ಬಿಸ್ನೆಸ್ ಸ್ಕೂಲ್ ಇದರ ಅಧ್ಯಕ್ಷರಾದ ಡಾ. ರಾಘವೇಂದ್ರ ಹೊಳ್ಳ ಭಾಗವಹಿಸಿ ವಿದ್ಯಾರ್ಥಿಗಳಿಗೆ ಹಿತವಚನ ನುಡಿದರು.
ಪ್ರಭಾರ ಪ್ರಾಂಶುಪಾಲರು ಸ್ವಾಗತಿಸಿದರು. ಭೌತಶಾಸ್ತ್ರ ಉಪನ್ಯಾಸಕರಾದ ಶ್ರೀಮತಿ ಅಪರ್ಣ ವಂದಿಸಿದರು. ಜೀವಶಾಸ್ತ್ರ ಉಪನ್ಯಾಸಕರಾದ ಶ್ರೀಮತಿ ರೈನಾ ರಾಡ್ರಿಗಸ್ ನಿರ್ವಹಿಸಿದರು.
ಕಾಲೇಜಿನ ಎಲ್ಲಾ ಉಪನ್ಯಾಸಕರು, ಕಚೇರಿ ಸಿಬ್ಬಂದಿ, ವಿದ್ಯಾರ್ಥಿಗಳು, ಪೋಷಕರು ಭಾಗವಹಿಸಿದ್ದರು.