ಕಕ್ಯಪದವು, ಅಕ್ಟೋಬರ್ 02, 2024: ಎಲ್ ಸಿ ಆರ್ ವಿದ್ಯಾಸಂಸ್ಥೆಯ ಸಭಾಂಗಣದಲ್ಲಿ ಮೋಹನ್‌ದಾಸ್ ಕರಮಚಂದ್ ಗಾಂಧಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿ ಎಂಬ ಇಬ್ಬರು ಮಹಾನ್ ನಾಯಕರ ಜನ್ಮದಿನವನ್ನು ಆಚರಿಸಲಾಯಿತು.
ಕಾರ್ಯಕ್ರಮದಲ್ಲಿ ಸಂಸ್ಥೆಯ ಪ್ರಾಂಶುಪಾಲರಾದ ಜೋಸ್ಟನ್ ಲೋಬೋ, ಸಂಯೋಜಕರಾದ ಯಶವಂತ್ ಜಿ ನಾಯಕ್ ಹಾಗೂ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿಭಾಗದ ಮುಖ್ಯ ಶಿಕ್ಷಕಿಯಾದ ವಿಜಯಾ ಕೆ ಪುಷ್ಪ ನಮನಗಳನ್ನು ಸಲ್ಲಿಸಿ, ಮಹಾತ್ಮ ಗಾಂಧೀಜಿ ಮತ್ತು ಶಾಸ್ತ್ರೀಜಿಯವರ ಜೀವನ ಮತ್ತು ಭಾರತದ ಸ್ವಾತಂತ್ರ್ಯ ಹೋರಾಟಕ್ಕೆ ಅವರ ಅಮೂಲ್ಯ ಕೊಡುಗೆಗಳು ಮತ್ತು ಅವರ ಸತ್ಯ ಮತ್ತು ಅಹಿಂಸೆಯ ಆದರ್ಶಗಳನ್ನು ಸ್ಮರಿಸಲಾಯಿತು. ಸಂಸ್ಥೆಯ ಬೋಧಕ ಬೋಧಕೇತರ ವರ್ಗ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.