ಪೆರ್ಲಂಪಾಡಿ, ಅಕ್ಟೋಬರ್ 2: ದ .ಕ.ಜಿ.ಪಂ. ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಪೆರ್ಲಂಪಾಡಿಯಲ್ಲಿ ಗಾಂಧಿ ಜಯಂತಿ ಆಚರಣೆ ಹಾಗೂ ಸ್ವಚ್ಛತಾ ಆಂದೋಲನ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಆಯೋಜಿಸಲಾಯಿತು. ಕಾರ್ಯಕ್ರಮದಲ್ಲಿ ಶಾಲಾಭಿವೃದ್ಧಿ ಸಮಿತಿ ಸದಸ್ಯರು, ಶಿಕ್ಷಕ ವೃಂದ, ವಿದ್ಯಾರ್ಥಿಗಳು, ಪೋಷಕರು ಹಾಗೂ ಗ್ರಾಮಸ್ಥರು ಭಾಗವಹಿಸಿ ಮಹಾತ್ಮ ಗಾಂಧೀಜಿಯವರ ಆದರ್ಶಗಳನ್ನು ಸ್ಮರಿಸಿದರು.

ಕಾರ್ಯಕ್ರಮದ ಅಂಗವಾಗಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಶಾಲಾ ಆವರಣ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಸ್ವಚ್ಛತಾ ಕಾರ್ಯಗಳನ್ನು ಕೈಗೊಳ್ಳಲಾಯಿತು.

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಒಕ್ಕೂಟದ ಅಧ್ಯಕ್ಷ ಯಶೋಧರ , ಕೇಂದ್ರದ ಅಧ್ಯಕ್ಷ ಉದಯ ಕುಮಾರ್, B ಒಕ್ಕೂಟದ ಅಧ್ಯಕ್ಷರು ಪ್ರಶಾಂತ,ಕೊಳ್ತಿಗೆ ಒಕ್ಕೂಟದ ಸೇವಾಪ್ರತಿನಿಧಿ ಶಾರದಾ ಪುಲ್ಲಾಜೆ , ಪೆರ್ಲಂಪಾಡಿ ಒಕ್ಕೂಟದ ಸೇವಾಪ್ರತಿನಿಧಿ ದಿವ್ಯಾ ಶ್ರೀ, ಒಕ್ಕೂಟದ ಸದಸ್ಯರು ಹಾಗೂ ಪೋಷಕರು ಕಾರ್ಯಕ್ರಮದಲ್ಲಿ ಸಕ್ರಿಯವಾಗಿ ಭಾಗವಹಿಸಿದರು.

ಗಾಂಧಿ ಜಯಂತಿಯ ಮಹತ್ವವನ್ನು ಸಾರುವ ಈ ಸ್ವಚ್ಛತಾ ಆಂದೋಲನ ಕಾರ್ಯಕ್ರಮವು ಯಶಸ್ವಿಯಾಗಿ ನೆರವೇರಿತು.