ದಿನಾಂಕ 16/10/2026 ರಂದು ನಮ್ಮ ಕಾಲೇಜಿನಲ್ಲಿ ವಿದ್ಯಾರ್ಥಿಗಳಲ್ಲಿ ಪ್ರಜಾಪ್ರಭುತ್ವ, ಸಂಸಧೀಯ ವ್ಯವಸ್ಥೆ ಹಾಗೂ ರಾಜಕೀಯ ಅರಿವನ್ನು ಬೆಳೆಸುವ ಉದ್ದೇಶದಿಂದ ವಿದ್ಯಾರ್ಥಿ ಪ್ರತಿಭಾ ವೇದಿಕೆಯ ವತಿಯಿಂದ ಅಣಕು ಸಂಸತ್ತು (Mock Parliament )ಕಾರ್ಯಕ್ರಮವನ್ನು ಆಯೋಜಿಸಲಾಯಿತು.

ಈ ಕಾರ್ಯಕ್ರಮದ ಸಭಾಧ್ಯಕ್ಷ ಸ್ಥಾನವನ್ನು ವಿದ್ಯಾರ್ಥಿ ಕ್ಷೇಮಪಾಲನ ಅಧಿಕಾರಿಯಾದ ಪ್ರೊ.ರೋನಾಲ್ಡ್ ಪ್ರವೀಣ್ ಕೊರೆಯವಹಿಸಿದರು. ಹಾಗೇಯೆ ಕಾಲೇಜಿನ ಇತರಉಪನ್ಯಾಸಕರುಉಪಸ್ಥಿತರಿದ್ದರು. ವಿದ್ಯಾರ್ಥಿ ಪತಿಭಾ ವೇದಿಕೆಯ ಪದಾಧಿಕಾರಿಗಳು ಹಾಗೂ ಪ್ರತಿಪಕ್ಷದವರು ಭಾಗಿಯಾಗಿದ್ದರು. ವಿದ್ಯಾರ್ಥಿಗಳು ಪ್ರಶೋತ್ತರ ಕಲಾಪದಲ್ಲಿ ಭಾಗವಹಿಸಿ ತಮ್ಮ ಅಭಿಪ್ರಾಯವನ್ನು ಮಂಡಿಸಿದರು. ಸಭಾಧ್ಯಕ್ಷರು ಸಭೆಯನ್ನು ಶಿಸ್ತುಬದ್ಧವಾಗಿ ನಡೆಸಿಕೊಟ್ಟರು. ಇದು ವಿದ್ಯಾರ್ಥಿಗಳಲ್ಲಿ ನಾಯಕತ್ವ, ಸಂವಹನ ಕೌಶಲ, ಆತ್ಮವಿಶ್ವಾಸ ಮತ್ತು ಸಾಮಾಜಿಕ ಜವಾಬ್ದಾರಿಯ ಮನೋಭಾವವನ್ನು ಬೆಳೆಸಲು ಸಹಕಾರಿಯಾಯಿತು.