ಮಂಗಳೂರು, 12 ನವೆಂಬರ್ 2025: ಸರ್ಕಾರಿ ಪ್ರೌಢಶಾಲೆ ಮುಲ್ಲಕಾಡಿನಲ್ಲಿ ಇಂದು ಸ್ವಚ್ಚತಾ ಕಾರ್ಯಕ್ರಮವನ್ನು ಆಯೋಜಿಸಲಾಯಿತು. ಶಾಲೆಯ ವಿದ್ಯಾರ್ಥಿಗಳು, ಶಿಕ್ಷಕರು, ಹಳೆ ವಿದ್ಯಾರ್ಥಿ ಸಂಘದ ಸದಸ್ಯರು ಹಾಗೂ ಪೋಷಕರು ಉತ್ಸಾಹಪೂರ್ಣವಾಗಿ ಈ ಕಾರ್ಯಕ್ರಮದಲ್ಲಿ ಭಾಗವಹಿಸಿದರು.

ಈ ಸ್ವಚ್ಚತಾ ಅಭಿಯಾನದ ಉದ್ದೇಶ ಶಾಲಾ ಆವರಣವನ್ನು ಶುದ್ಧವಾಗಿ ಮತ್ತು ಸೌಂದರ್ಯಮಯವಾಗಿ ಉಳಿಸುವುದರ ಜೊತೆಗೆ ವಿದ್ಯಾರ್ಥಿಗಳಲ್ಲಿ ಸ್ವಚ್ಚತೆಯ ಕುರಿತು ಜಾಗೃತಿ ಮೂಡಿಸುವುದಾಗಿತ್ತು. ಕಾರ್ಯಕ್ರಮದ ವೇಳೆ ಶಾಲಾ ಪರಿಸರದಲ್ಲಿ ತೋಟಗಾರಿಕೆ, ಕಸ ಸಂಗ್ರಹಣೆ ಮತ್ತು ಸ್ವಚ್ಛತೆ ಕಾಪಾಡುವ ಕಾರ್ಯಗಳನ್ನು ಕೈಗೊಳ್ಳಲಾಯಿತು.

ಶಾಲೆಯ ಪರವಾಗಿ ಹಳೆ ವಿದ್ಯಾರ್ಥಿ ಸಂಘದ ಸದಸ್ಯರು ಹಾಗೂ ಪೋಷಕರಿಗೆ ಅವರ ಸಕ್ರಿಯ ಸಹಭಾಗಿತ್ವಕ್ಕಾಗಿ ಹೃತ್ಪೂರ್ವಕ ಧನ್ಯವಾದಗಳನ್ನು ಸಲ್ಲಿಸಲಾಯಿತು. ಈ ರೀತಿಯ ಕಾರ್ಯಗಳು ಶಾಲಾ ಸಮುದಾಯದ ಏಕತೆ ಮತ್ತು ಸಾಮಾಜಿಕ ಜವಾಬ್ದಾರಿಯನ್ನು ಬಲಪಡಿಸುವುದಕ್ಕೆ ಸಹಕಾರಿಯಾಗಿವೆ.
ಕಾರ್ಯಕ್ರಮವು ಯಶಸ್ವಿಯಾಗಿ ಮುಕ್ತಾಯಗೊಂಡಿದ್ದು, ಎಲ್ಲರ ಸಹಭಾಗಿತ್ವವು ಶ್ಲಾಘನೀಯವಾಗಿತ್ತು.