ಮಂಗಳೂರು, ಆಗಸ್ಟ್ 20, 2024 : ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜು ಮಂಗಳೂರು ಇದರ ರಾಷ್ಟ್ರೀಯ ಸೇವಾ ಯೋಜನೆ ಘಟಕಗಳ ವತಿಯಂದ ಸದ್ಭಾವನ ದಿನ ಆಚರಿಸಲಾಯತು. ಎಲ್ಲ ಧರ್ಮ ಭಾಷೆ ಹಾಗೂ ರಾಜ್ಯಗಳ ಜನರೆಲ್ಲ ಸೌಹಾರ್ದತೆಯನ್ನು ಉತ್ತೇಜಿಸಿ ಎಲ್ಲರಲ್ಲೂ ಸಂಭಾವನೆಯನ್ನು ಮೂಡಿಸಿ ಹಿಂಸಾಚಾರವನ್ನು ತ್ಯಜಿಸುವಂತೆ ಮಾಡಲು ಸದ್ಭಾವನಾ ದಿನಾಚರಣೆಯನ್ನು ಆಚರಿಸಲಾಯಿತು.

ಡಾ ಸುಮನಾ ಬಿ ಯವರು ಸದ್ಭಾವನ ದಿನದ ಮಹತ್ವವನ್ನು ತಿಳಿಸಿದರು. ಡಾ ಮೀನಾಕ್ಷಿ ಆಚಾರ್ಯರವರು ಪ್ರತಿಜ್ಞಾ ವಿಧಿಯನ್ನು ಬೋಧಿಸಿದರು. ಕಾಲೇಜಿನ ಪ್ರಾಂಶುಪಾಲರಾದ ಪ್ರೊಫೆಸರ್ ಜಗದೀಶ ಬಾಳಾ ರವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು. ವಾಣಿಜ್ಯ ವಿಭಾಗದ ಸಹಾಯಕ ಪ್ರಾಧ್ಯಾಪಕ ಗಂಗಾಧರ ಇವರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. 126 ವಿದ್ಯಾರ್ಥಿನಿಯರು ಪ್ರತಿಜ್ಞೆಯನ್ನು ಕೈಗೊಂಡರು.