ಮಂಗಳೂರು, 14 ಮಾರ್ಚ್ 2025: ಶ್ರೀ ಎಸ್ ಡಿ ಎಮ್ ಬಿಸಿನೆಸ್ ಮ್ಯಾನೇಜ್ಮೆಂಟ್ ಕಾಲೇಜಿನಲ್ಲಿ ನಡೆದ ರಾಷ್ಟ್ರೀಯ ಮಟ್ಟದ ಇನ್ಫೋ – ಟೆಕ್ ಫೆಸ್ಟ್ ಸಿಗ್ಮಾ 2025 ದರಲ್ಲಿ ಐಎಂಜೆ ವಿಜ್ಞಾನ ಮತ್ತು ವಾಣಿಜ್ಯ ಸಂಸ್ಥೆಯ ವಿದ್ಯಾರ್ಥಿಗಳು ವಿವಿಧ ಸ್ಪರ್ಧೆಗಳಲ್ಲಿ ಪಾಲ್ಗೊಂಡಿದ್ದು, ಕೋಡಿಂಗ್ ಅಂಡ್ ಡಿಬಗ್ಗಿಂಗ್ ಸ್ಪರ್ಧೆಯಲ್ಲಿ ಸಂಸ್ಥೆಯ ತೃತೀಯ ಬಿಸಿಎ ವಿದ್ಯಾರ್ಥಿ ಶ್ರೀ ದೀಕ್ಷಿತ್ ಪ್ರಥಮ ಬಹುಮಾನವನ್ನು ಹಾಗೂ ವೆಬ್ ಡಿಸೈನ್ ಸ್ಪರ್ಧೆಯಲ್ಲಿ ವಿದ್ಯಾರ್ಥಿ ಶ್ರೀ ನಿತಿನ್ ದ್ವಿತೀಯ ಬಹುಮಾನವನ್ನು ಪಡೆದಿರುತ್ತಾರೆ.
ಇವರಿಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಉಪ ಪ್ರಾಂಶುಪಾಲರು, ಬೋಧಕ ಹಾಗೂ ಬೋಧಕೇತರ ವೃಂದದವರು ಮತ್ತು ವಿದ್ಯಾರ್ಥಿಗಳು ಶುಭ ಹಾರೈಸಿದ್ದಾರೆ.