ಮೂಡ್ಲಕಟ್ಟೆ, 29 ಮಾರ್ಚ್ 2025: ಪದವಿ ಕಾಲೇಜಿನ ವಿದ್ಯಾರ್ಥಿಗಳ ಪ್ರತಿಭಾ ಅನಾವರಣದ ವೇದಿಕೆಯಾದ ‘ಕಲೋತ್ಸವ 2025’ ವಿಜೃಂಭಣೆಯಿಂದ ಆಚರಿಸಲಾಯಿತು. ಪ್ರಥಮ ದ್ವಿತೀಯ ಹಾಗೂ ತೃತೀಯ ಪದವಿ ತರಗತಿಗಳ ನಡುವೆ ನಡೆದ ಸಾಂಸ್ಕೃತಿಕ ಸ್ಪರ್ಧೆಯಲ್ಲಿ ವಿದ್ಯಾರ್ಥಿಗಳು ಉತ್ತಮವಾದ ಪ್ರದರ್ಶನ ನೀಡಿದರು.
ಸಭಾ ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಆಗಮಿಸಿದ ಶಂಕರ ನಾರಾಯಣ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಡಾ. ವೆಂಕಟರಾಮ್ ಭಟ್ ದೀಪ ಪ್ರಜ್ವಲಿಸುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಉದ್ಘಾಟಿಸಿ ಮಾತನಾಡಿದ ಅವರು, ‘ಸಂಸ್ಕಾರದ ಮೂಲಕ ಕಲೆ ಉನ್ನತವಾದ ಹಂತವನ್ನು ತಲುಪುತ್ತದೆ. ಪ್ರತಿಯೊಬ್ಬ ವಿದ್ಯಾರ್ಥಿ ತನ್ನ ಜೀವನದಲ್ಲಿ ಉತ್ತಮ ಸಂಸ್ಕಾರವನ್ನು ರೂಢಿಸಿಕೊಳ್ಳಬೇಕೆಂದು ವಚನಗಳ ಉದಾಹರಣೆಯೊಂದಿಗೆ ತಿಳಿಸಿದರು’.
ಸಂಸ್ಥೆಯ ಬ್ರ್ಯಾಂಡ್ ಬಿಲ್ಡಿಂಗ್ ನಿರ್ದೇಶಕರಾದ ಡಾ. ರಾಮಕೃಷ್ಣರವರು, ಸಂಸ್ಥೆಯು ವಿದ್ಯಾರ್ಥಿಗಳ ಪ್ರತಿಭೆಗೆ ಉತ್ತಮವಾದ ವೇದಿಕೆಗಳನ್ನು ನೀಡುತ್ತಾ ಬಂದಿದೆ. ವಿದ್ಯಾರ್ಥಿಗಳು ಅದರ ಸದುಪಯೋಗ ಪಡೆದುಕೊಳ್ಳಬೇಕೆಂದು ಶುಭ ಹಾರೈಸಿದರು.
ಸಭಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಕಾಲೇಜಿನ ಪ್ರಾಂಶುಪಾಲರಾದ ಡಾ. ಪ್ರತಿಭಾ ಎಂ ಪಟೇಲ್, ಎಲ್ಲಾ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು. ಕಾರ್ಯಕ್ರಮದಲ್ಲಿ ಉಪಪ್ರಾಂಶುಪಾಲರಾದ ಶ್ರೀ ಜಯಶೀಲ್ ಕುಮಾರ್, ಲಲಿತ ಕಲಾ ಸಂಘದ ಸಂಯೋಜಕರಾದ ಗಣಿತಶಾಸ್ತ್ರ ಉಪನ್ಯಾಸಕಿ ಕು. ರಕ್ಷಿತಾ ಅಡಿಗ ಹಾಗೂ ವಾಣಿಜ್ಯಶಾಸ್ತ್ರ ಉಪನ್ಯಾಸಕಿ ಕು. ನಿಧಿ ಉಪಸ್ಥಿತರಿದ್ದರು. ವಿದ್ಯಾ ಅಕಾಡೆಮಿಯ ಶಿಕ್ಷಕ ಶ್ರೀ ಸಚಿನ್ ಹಾಗೂ ನರ್ಸಿಂಗ್ ಕಾಲೇಜಿನ ಉಪ ಪ್ರಾಂಶುಪಾಲರಾದ ಶ್ರೀಮತಿ ರೂಪಶ್ರೀ ರವರು ತೀರ್ಪುಗಾರರಾಗಿ ನಿರ್ವಹಿಸಿದರು. ಗಣಕಶಾಸ್ತ್ರದ ಉಪನ್ಯಾಸಕಿ ಶ್ರೀಮತಿ ನಾಫಿಯ ಅಕ್ತಾರಿ ಕಾರ್ಯಕ್ರಮವನ್ನು ನಿರೂಪಿಸಿದರು.