ಡೊಂಗರಕೇರಿ, 14 ನವೆಂಬರ್ 2024: ಕೆನರಾ ಆಂಗ್ಲ ಹಿರಿಯ ಪ್ರಾಥಮಿಕ ಶಾಲೆ ಡೊಂಗರಕೇರಿಯಲ್ಲಿ ಮಕ್ಕಳ ದಿನಾಚರಣೆಯ ದಿನದಂದು ಕೆನರಾ ಆಡಳಿತ ಮಂಡಳಿಯ ವತಿಯಿಂದ ವಿದ್ಯಾರ್ಥಿಗಳಿಗೆ ಕೊಡುಗೆಯಾಗಿ ನೀಡಿದ ಸುಸಜ್ಜಿತ ಆಧುನಿಕ ಉಪಕರಣಗಳನ್ನು ಒಳಗೊಂಡ ನೂತನ ವಿಜ್ಞಾನ ಪ್ರಯೋಗಾಲಯವನ್ನು ಉದ್ಘಾಟಿಸಲಾಯಿತು.

ಈ ಉದ್ಘಾಟನಾ ಸಮಾರಂಭದ ಮುಖ್ಯ ಅತಿಥಿಯಾಗಿ ಕೆನರಾ ಶಿಕ್ಷಣ ಸಂಸ್ಥೆಯ ಹಳೆ ವಿದ್ಯಾಥಿ೯ ಹಾಗೂ ಮಂಗಳೂರಿನ ಪ್ರಸಿದ್ಧ ಕೆ.ಎಂ.ಸಿ. ಆಸ್ಪತ್ರೆಯ ಖ್ಯಾತ ಹೃದ್ರೋಗ ತಜ್ಞರಾದ ಡಾ. ಡಿ. ನರಸಿಂಹ ಪೈ.ಯವರು ಉದ್ಘಾಟಿಸಿದರು. “ವಿಜ್ಞಾನ ಶಿಕ್ಷಣದಲ್ಲಿ ಪ್ರಯೋಗಶಾಲೆಯ ಪ್ರಾಮುಖ್ಯತೆ”ಯ ಕುರಿತು ಮಾತನಾಡಿದರು.

ವೇದಿಕೆಯಲ್ಲಿ ಆಡಳಿತ ಮಂಡಳಿಯ ಉಪಾಧ್ಯಕ್ಷರಾದ ಶ್ರೀಯುತ ಕೆ. ಸುರೇಶ್ ಕಾಮತ್, ಕೆನರಾ ವಿಕಾಸ್ ಕಾಲೇಜ್ ನ ಸಂಯೋಜಕರಾದ ಶ್ರೀ ಬಸ್ತಿ ಪುರುಷೋತ್ತಮ ಶೆಣೈ, ಕೆನರಾ ಕಾಲೇಜಿನ ಆಡಳಿತ ನಿರ್ವಾಹಕಿಯಾದ ಶ್ರೀಮತಿ ದೀಪ್ತಿ ನಾಯಕ್, ಆಡಳಿತ ಮಂಡಳಿಯ ಸಾರ್ವಜನಿಕ ಸಂಪರ್ಕಾಧಿಕಾರಿ ಶ್ರೀಮತಿ ಉಜ್ವಲ್ ಮಲ್ಯ,ಹಾಗೂ ಆಡಳಿತ ಮಂಡಳಿಯ ಸದಸ್ಯರಾದ ಶ್ರೀ ಡಿ. ವಿಕ್ರಂ ಪೈ , ಹಾಗೂ ಕೆನರಾ ಆಂಗ್ಲ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಕವಿತಾ ಮೌರ್ಯ ಉಪಸ್ಥಿತರಿದ್ದರು. ಕಾರ್ಯಕ್ರಮವು ವಂದನಾರ್ಪಣೆಯೊಂದಿಗೆ ಮುಕ್ತಾಯವಾಯಿತು.