ಕಕ್ಯಪದವು, ಆಗಸ್ಟ್ 15, 2024 : ಎಲ್ ಸಿ ಆರ್ ವಿದ್ಯಾ ಸಂಸ್ಥೆಯಲ್ಲಿ 78ನೇ ಸ್ವಾತಂತ್ರ್ಯ ದಿನಾಚರಣೆಯನ್ನು ದೇಶಭಕ್ತಿ ಗೀತೆ ಹಾಡುವುದರ ಮೂಲಕ ಆರಂಭಿಸಲಾಯಿತು. ಶಾಲಾ ಸಂಚಾಲಕರಾದ ಬಬಿತ ಆರ್ ನಾಥ್ ರ ಮುಂದಾಳತ್ವದಲ್ಲಿ ಕಾರ್ಯದರ್ಶಿಯಾದ ಶಿವಾನಿ ಆರ್ ನಾಥ್ ಧ್ವಜಾರೋಹಣ ಕಾರ್ಯಕ್ರಮವನ್ನು ನೆರವೇರಿಸಿ ನಮ್ಮ ರಾಷ್ಟ್ರಕ್ಕೆ ಗೌರವವನ್ನು ಸಲ್ಲಿಸಿದರು. ಹಾಗು ಈ ಶುಭ ಸಂದರ್ಭದಲ್ಲಿ ಸಾಧಕರನ್ನು ಸನ್ಮಾನಿಸಲಾಯಿತು.

ದೈಹಿಕ ಶಿಕ್ಷಕಿ ಘೋಷವಾಕ್ಯ ಹೇಳುವುದರ ಮೂಲಕ ಸ್ವಾತಂತ್ರ್ಯ ಹೋರಾಟಗಾರರನ್ನು ಸ್ಮರಿಸಿದರು.ಸಂಸ್ಥೆಯ ಪ್ರಾಂಶುಪಾಲರಾದ ಜೋಸ್ಟನ್ ಲೋಬೋ, ಸಂಯೋಜಕರಾದ ಯಶವಂತ್ ಜಿ ನಾಯಕ್ ಹಾಗೂ ಪ್ರಾಥಮಿಕ ಮತ್ತು ಪ್ರೌಢಶಾಲಾ ಮುಖ್ಯ ಶಿಕ್ಷಕಿಯಾದ ವಿಜಯಾ ಕೆ ಭಾಗವಹಿಸಿದರು.ಬೋಧಕ ಬೋಧಕೇತರ ವರ್ಗದವರು ಹಾಗೂ ಪೋಷಕರು ಈ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಕಾಲೇಜು ವಿಭಾಗದ ಉಪನ್ಯಾಸಕಿಯಾದ ವಿಂಧ್ಯಶ್ರೀ ಕಾರ್ಯಕ್ರಮವನ್ನು ನಿರೂಪಿಸಿ ವಂದಿಸಿದರು.