ಆಲಂಕಾರು, ಆಗಸ್ಟ್ 15, 2024 : ದುರ್ಗಾಂಬಾ ಪದವಿ ಪೂರ್ವ ಕಾಲೇಜು
ಆಲಂಕಾರಿನಲ್ಲಿ 78ನೇ ಸ್ವಾತಂತ್ರ್ಯೋತ್ಸವವು ನಡೆಯಿತು. ಆಡಳಿತ ಮಂಡಳಿಯ ಅಧ್ಯಕ್ಷರಾದ ದಯಾನಂದ ರೈ ಮನವಳಿಕೆ ಯವರು ಧ್ವಜಾರೋಹಣ ನೆರವೇರಿಸಿದರು. ಇವರು ಸ್ವಾತಂತ್ರ್ಯೋತ್ಸವದ ಬಗ್ಗೆ ವಿದ್ಯಾರ್ಥಿಗಳಲ್ಲಿ ಅರಿವು ಮೂಡಿಸಿ, ದೇಶಪ್ರೇಮ ಹಾಗೂ ದೇಶಭಕ್ತಿಯ ಮಹತ್ವ ಸಾರಿ ಎಲ್ಲರಿಗೂ ಶುಭಾಹಾರೈಸಿದರು.

ಈ ಕಾರ್ಯಕ್ರಮದಲ್ಲಿ ಆಡಳಿತ ಮಂಡಳಿಯ ಸದಸ್ಯರಾದ ರಾಮರಾಜ ನಗ್ರಿ, ತಾರನಾಥ ರೈ ನಗ್ರಿ, ವಿಜಯಕುಮಾರ್ ರೈ ಮನವಳಿಕೆ, ಶಿಕ್ಷಕರಕ್ಷಕ ಸಂಘದ ಅಧ್ಯಕ್ಷ ಶ್ರೀನಾಥ್ ಗೌಡ ಕೇವಳ, ಆಡಳಿತ ಅಧಿಕಾರಿಗಳಾದ ಶ್ರೀ ಪತಿರಾವ್ ಎಚ್ , ಮುಖ್ಯ ಗುರುಗಳಾದ ನವೀನ್ ರೈ, ಪ್ರಾಂಶುಪಾಲರಾದ ರೂಪ ಜೆ ರೈ, ಎಲ್ಲಾ ಬೋಧಕ ಬೋಧಕೇತರ ವೃಂದದವರು ಉಪಸ್ಥಿತರಿದ್ದರು.