ಕಲ್ಲಡ್ಕ, 25 ಅಕ್ಟೋಬರ್ 2025: ಕಲ್ಲಡ್ಕ ಶ್ರೀರಾಮ ಪ್ರಥಮ ದರ್ಜೆ ಮಹಾವಿದ್ಯಾಲಯದಲ್ಲಿ ದ.ಕ. ಜಿಲ್ಲೆಯ ಪಿಯುಸಿ ವಿದ್ಯಾರ್ಥಿಗಳಿಗಾಗಿ ಅಂತರ್ ಕಾಲೇಜು ಮಟ್ಟದ ಫೆಸ್ಟ್ ಉತ್ಕರ್ಷ ಅ. 25ರಂದು ನಡೆಯಿತು.
ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ| ಪ್ರಭಾಕರ್‌ಭಟ್ ಕಲ್ಲಡ್ಕ ಅಧ್ಯಕ್ಷತೆಯಲ್ಲಿ ಸಮಾರಂಭವನ್ನು ಮಂಗಳೂರು ಲೋಟಸ್ ಪ್ರಾಪರ್ಟಿಸ್‌ನ ಕಾನೂನು ಸಲಹೆಗಾರ ಲತೀಶ್ ಶೆಟ್ಟಿ ಉದ್ಘಾಟಿಸಿದರು.
ಕಲ್ಲಡ್ಕ ಶ್ರೀರಾಮ ಸೌಹಾರ್ದ ಸಹಕಾರಿ ಸಂಘದ ಅಧ್ಯಕ್ಷ ನಾರಾಯಣ ಶೆಟ್ಟಿ ಕುಲ್ಯಾರ್, ಶ್ರೀ ಸರಸ್ವತಿ ಕ್ರೆಡಿಟ್ ಸೌಹಾರ್ದ ಸಹಕಾರಿಯ ಕಲ್ಲಡ್ಕ ಶಾಖಾ ಮ್ಯಾನೇಜರ್ ಗೋಪಾಲಕೃಷ್ಣ ಪ್ರಭು, ಸಿದ್ದಕಟ್ಟೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಪ್ರಭಾಕರ ಪ್ರಭು, ಬಿಜೆಪಿ ಯುವ ಮುಂದಾಳು ವಿಕಾಸ್ ಕುಮಾರ್ ಪುತ್ತೂರು, ಹೋಟೆಲ್ ಉದ್ಯಮಿ ಕರುಣಾಕರ ಶೆಟ್ಟಿ ಮೊದಲಾದವರು ಅತಿಥಿಗಳಾಗಿ ಆಗಮಿಸಿದರು.
ಸಮಾರೋಪ ಕಾರ್ಯಕ್ರಮದಲ್ಲಿ ಹಾಸ್ಯ ನಟರಾದ ದೀಪಕ್ ರೈ ಪಾಣಾಜೆ, ಪುಷ್ಪರಾಜ್ ಬೊಳ್ಳಾರ್ ಆಗಮಿಸಲಿದ್ದಾರೆ ಎಂದು ಪ್ರಾಂಶುಪಾಲ ಕೃಷ್ಣಪ್ರಸಾದ್ ಕಾಯರ್‌ಕಟ್ಟೆ ತಿಳಿಸಿದ್ದಾರೆ