ಪುತ್ತೂರು: ಕೊಂಬೆಟ್ಟು ಸರಕಾರಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಪ್ರಸ್ತುತಪಡಿಸಿದ ಸ್ಮಾರ್ಟ್ ಫೇಸ್ ರೆಕಗ್ನಿಷನ್ ಎಟೆಂಡೆನ್ಸ್ ಸಿಸ್ಟಂನ ಮಾದರಿಯು ಜಿಲ್ಲಾಮಟ್ಟದ ವಿಜ್ಞಾನ ಮಾದರಿ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದಿದೆ.

ದ್ವಿತೀಯ ಪಿಯುಸಿ ವಾಣಿಜ್ಯ ವಿಭಾಗದ ವಿದ್ಯಾರ್ಥಿ ಅರುಣ್ ಕುಮಾರ್ ವಿ. ಇವರ ನೇತೃತ್ವದಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿ ಚಿನ್ಮಯ ಅವರೊಂದಿಗೆ ಸೇರಿ ಈ ನೂತನ ವಿಜ್ಞಾನ ಮಾದರಿಯನ್ನು ಮಂಗಳೂರಿನ ಶ್ರೀನಿವಾಸ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯಲ್ಲಿ ನಡೆದ ಎನ್ವಿಶನ್ ಜೂನಿಯರ್ಸ್-2025 ಕಾರ್ಯಕ್ರಮದಲ್ಲಿ ಪ್ರಸ್ತುತ ಪಡಿಸಿದ್ದರು.

ಸುಮಾರು 20 ಕಾಲೇಜಿನ ವಿದ್ಯಾರ್ಥಿಗಳು ಭಾಗವಹಿಸಿದ್ದ ಈ ಸ್ಪರ್ಧೆಯಲ್ಲಿ ಕೊಂಬೆಟ್ಟು ಸರಕಾರಿ ಕಾಲೇಜಿನ ವಿದ್ಯಾರ್ಥಿಗಳು ಪ್ರಥಮ ಸ್ಥಾನ ಗಳಿಸಿದ್ದಾರೆ. ವಿದ್ಯಾರ್ಥಿಗಳು ಆವಿಷ್ಕರಿಸಿದ ಸ್ಮಾರ್ಟ್ ಫೇಸ್ ರೆಕಗ್ನಿಷನ್ ಅಟೆಂಡೆನ್ಸ್‌ ಸಿಸ್ಟಮ್ ತಾಂತ್ರಿಕ ಯೋಜನೆಯುಸ್ಪರ್ಧೆಯಲ್ಲಿ ಅತಿ ಹೆಚ್ಚು ಅಂಕಗಳನ್ನು ಗಳಿಸಿ ಮೊದಲ ಬಹುಮಾನಕ್ಕೆ ಪಾತ್ರವಾಗಿದೆ. ಈಗಾಗಲೇ ರಾಜ್ಯಮಟ್ಟದಲ್ಲಿ ಶಿಕ್ಷಣ ಇಲಾಖೆಯ ಗಮನ ಸೆಳೆದಿರುವ ಈ ಯಶಸ್ವಿ ಯೋಜನೆಗೆ ಕಾಲೇಜಿನ ಉಪನ್ಯಾಸಕ ಅಶ್ಲೇಶ್ ಕುಮಾ‌ರ್ ಅವರು ಮಾರ್ಗದರ್ಶನ ನೀಡಿರುತ್ತಾರೆ. ಕಾಲೇಜಿನ ಪ್ರಾಂಶುಪಾಲ ಗೋಪಾಲ ಗೌಡ ಹಾಗೂ ಉಪನ್ಯಾಸಕರು ವಿಜೇತ ವಿದ್ಯಾರ್ಥಿಗಳು ಮಾರ್ಗದರ್ಶಕರನ್ನು ಅಭಿನಂದಿಸಿದರು.

Leave a Reply

Your email address will not be published. Required fields are marked *

You May Also Like

ಎಲ್.ಸಿ.ಆರ್ ಇಂಡಿಯನ್ ಪದವಿ ಕಾಲೇಜು ಕಕ್ಯಪದವು 100% ಫಲಿತಾಂಶ

ಕಕ್ಯಪದವು : ಎಲ್.ಸಿ.ಆರ್ ವಿದ್ಯಾಸಂಸ್ಥೆಯ 2023-24 ನೇ ಶೈಕ್ಷಣಿಕ ಸಾಲಿನ ( NEP ) ಮಂಗಳೂರು…

Local Talent Shines Bright: Trisha from Belthangady Selected for DKD Reality Show

Ms. Trisha, talented daughter of Mr. Prashant and Mrs. Shailaja, Guruvayanakere, has…

St. Joseph’s P U College, Bajpe Hosts Students’ Council Inauguration and Investiture Program

Bajpe, 23 June 2025: St. Joseph’s P U College, Bajpe held the…

ಗಾಯನ ಸ್ಪರ್ಧೆಯಲ್ಲಿ ಎಲ್ ಸಿ ಆರ್ ಸಂಸ್ಥೆಯ ವಿದ್ಯಾರ್ಥಿಗಳ ಸಾಧನೆ 

ಇರ್ವತ್ತೂರು, ಆಗಸ್ಟ್ 16, 2024 : ಇರ್ವತ್ತೂರು ಗ್ರಾಮ ಪಂಚಾಯತ್ ನಲ್ಲಿ ಭಾರತ್ ಸ್ಕೌಟ್ಸ್ ಮತ್ತು…