ಪುತ್ತೂರು: ಕೊಂಬೆಟ್ಟು ಸರಕಾರಿ ಪದವಿಪೂರ್ವ ಕಾಲೇಜಿನ ಪ್ರಥಮ ಪಿಯುಸಿ ವಿದ್ಯಾರ್ಥಿ ಲಿಖಿತ್ ಕುಮಾರ್ ಡಾಡ್ಜ್ ಬಾಲ್‌ನಲ್ಲಿ ಕರ್ನಾಟಕ ರಾಜ್ಯ ತಂಡದ ಸದಸ್ಯನಾಗಿ ಆಯ್ಕೆಯಾಗಿದ್ದು, ಗುಜರಾತಿನ ಅಹಮದಾಬಾದಿನಲ್ಲಿ ನವೆಂಬರ್ 1, 2 ಮತ್ತು 3 ರಂದು ನಡೆಯಲಿರುವ ರಾಷ್ಟ್ರೀಯ ಮಟ್ಟದ ಪಂದ್ಯಾಟದಲ್ಲಿ ಭಾಗವಹಿಸಲಿದ್ದಾರೆ.
ಇತ್ತೀಚೆಗೆ ಬೆಂಗಳೂರಿನ ಎಲ್ಲೇನಹಳ್ಳಿಯ ಟ್ರಾನ್ಸೆಂಡ್ ಗ್ರೂಪ್ ಆಫ್ ಇನ್‌ಸ್ಟಿಟ್ಯೂಶನ್ ಮತ್ತು ಕರ್ನಾಟಕ ರಾಜ್ಯ ಡಾಡ್ಜ್ ಬಾಲ್ ಎಸೋಸಿಯೇಶನ್ ಸಹಯೋಗದಲ್ಲಿ ನಡೆದ ಮೂರನೇ ಆವೃತ್ತಿಯ ರಾಷ್ಟ್ರಮಟ್ಟದ ಆಯ್ಕೆ ಪ್ರಕ್ರಿಯೆಯಲ್ಲಿ ಇವರು ಉತ್ತಮ ನಿರ್ವಹಣೆ ಪ್ರದರ್ಶಿಸಿದ್ದು, ದಕ್ಷಿಣ ಕನ್ನಡ ಜಿಲ್ಲೆಯಿಂದ ರಾಜ್ಯ ತಂಡಕ್ಕೆ ಆಯ್ಕೆಯಾದ ಏಕೈಕ ವಿದ್ಯಾರ್ಥಿಯಾಗಿರುತ್ತಾರೆ. ಈ ಕ್ರೀಡಾಪಟು ವಿದ್ಯಾರ್ಥಿಗೆ ದಕ್ಷಿಣ ಕನ್ನಡ ಜಿಲ್ಲಾ ಡಾಡ್ಜ್ ಬಾಲ್ ಅಸೋಸಿಯೇಷನ್ ಕಾರ್ಯದರ್ಶಿ ಉಪನ್ಯಾಸಕ ವಿಜೇತ್ ಕುಮಾರ್ ಅವರು ಸೂಕ್ತ ಮಾರ್ಗದರ್ಶನ ನೀಡಿದ್ದರು. ಕ್ರೀಡಾಳು ಲಿಖಿತ್‌ಕುಮಾರ್ ಇವರನ್ನು ಕಾಲೇಜಿನ ಪ್ರಾಂಶುಪಾಲ ಗೋಪಾಲ ಗೌಡ ಹಾಗೂ ಉಪನ್ಯಾಸಕರು ಮತ್ತು ಕಾಲೇಜು ಅಭಿವೃದ್ಧಿ ಸಮಿತಿಯ ಕಾರ್ಯಾಧ್ಯಕ್ಷ ಪ್ರಸಾದ್‌ಕೌಶಲ್ ಶೆಟ್ಟಿ ಮತ್ತು ಸದಸ್ಯರು ಅಭಿನಂದಿಸಿ ಶುಭ ಹಾರೈಸಿದರು.