ಕಕ್ಯಪದವು, 26 ನವೆಂಬರ್ 2024: ಎಲ್ ಸಿ ಆರ್ ಇಂಡಿಯನ್ ಪದವಿ ಪೂರ್ವ ಕಾಲೇಜಿನಲ್ಲಿ “ಸಂವಿಧಾನ ದಿನ” ದ ಅಂಗವಾಗಿ ವಿದ್ಯಾರ್ಥಿಗಳಲ್ಲಿ ಸಾಂವಿಧಾನಿಕ ಮೌಲ್ಯಗಳನ್ನು ಬಿತ್ತರಿಸುವ ನಿಟ್ಟಿನಲ್ಲಿ ವಿದ್ಯಾರ್ಥಿಗಳು ಪ್ರತಿಜ್ಞೆಯನ್ನು ಸ್ವೀಕರಿಸಿದರು.
ಸಂಸ್ಥೆಯ ಪ್ರಾಂಶುಪಾಲರಾದ ಜೋಸ್ಟನ್ ಲೋಬೋ, ಸಂಯೋಜಕರಾದ ಯಶವಂತ್ ಜಿ ನಾಯಕ್, ಪದವಿ ಪೂರ್ವ ವಿಭಾಗದ ಮುಖ್ಯಸ್ಥೆಯಾದ ಸೌಮ್ಯ ಹಾಗೂ ಉಪನ್ಯಾಸಕರು ಉಪಸ್ಥಿತರಿದ್ದರು.ವಿದ್ಯಾರ್ಥಿ ಕ್ಷೇಮಪಾನಾಧಿಕಾರಿ ವಿಂದ್ಯಾಶ್ರೀ ಪ್ರತಿಜ್ಞಾ ವಿಧಿಯನ್ನು ನಡೆಸಿಕೊಟ್ಟರು.