ಕಕ್ಯಪದವು: ಪಾದೆಗುತ್ತು ಲಿಂಗಪ್ಪ ಮಾಸ್ತರ್ ಎಜುಕೇಷನಲ್ ಟ್ರಸ್ಟ್(ರಿ). ನಿಂದ ನಡೆಸಲ್ಪಡುವ ಎಲ್.ಸಿ.ಆರ್ ವಿದ್ಯಾಸಂಸ್ಥೆ ಕಕ್ಯಪದವು ಇಲ್ಲಿನ ಪದವಿ ವಿಭಾಗದಲ್ಲಿ 2026-27ನೇ ಶೈಕ್ಷಣಿಕ ಸಾಲಿನ ವಿದ್ಯಾರ್ಥಿ ಸಂಘದ ಉದ್ಘಾಟನೆಯೊಂದಿಗೆ ಶೈಕ್ಷಣಿಕ ಕಾರ್ಯಚಟುವಟಿಕೆಗಳಿಗೆ ಚಾಲನೆ ನೀಡುವುದರೊಂದಿಗೆ ಪ್ರಥಮ ಪದವಿ ವಿಭಾಗದ ವಿದ್ಯಾರ್ಥಿಗಳಿಗೆ ಸ್ವಾಗತ ಕಾರ್ಯಕ್ರಮ “ಆಗಾಝ್” ಹಮ್ಮಿಕೊಳ್ಳಲಾಯಿತು.

ಸಂಸ್ಥೆಯ ಸಂಯೋಜಕರಾದ ಶ್ರೀಯುತ ಯಶವಂತ ಜಿ.ನಾಯಕ್ ದೀಪ ಬೆಳಗಿಸಿ ವಿದ್ಯುಕ್ತವಾಗಿ ಕಾರ್ಯಕ್ರಮ ಕ್ಕೆ ಚಾಲನೆ ನೀಡಿದರು. ಪದವಿ ವಿಭಾಗದ ಮುಖ್ಯಸ್ಥರಾದ ದೀಕ್ಷಿತಾ ವಿದ್ಯಾರ್ಥಿ ಸಂಘದ ಪದಾಧಿಕಾರಿಗಳಿಗೆ ಪ್ರತಿಜ್ಞಾ ವಿಧಿಯನ್ನು ಬೋಧಿಸಿದರು.

ಸಂಸ್ಥೆಯ ಪ್ರಾಂಶುಪಾಲರಾದ ಜೋಸ್ಟನ್ ಲೋಬೊ ಅಧ್ಯಕ್ಷತೆ ವಹಿಸಿ ಮಾತನಾಡಿ ವಿದ್ಯಾರ್ಥಿ ಶಕ್ತಿಯು ಅನಾವರಣಗೊಳ್ಳಬೇಕಾದರೆ ಸಾಂಘಿಕ ಪ್ರಯತ್ನಗಳು ಸಂಘದ ಮೂಲಕ ನಢಯಬೇಕು, ಅವಕಾಶಗಳನ್ನು ಸದ್ಬಳಕೆ ಮಾಡಿಕೊಂಡು, ಜ್ಞಾನವನ್ನು ಸಂಪಾದಿಸಿಕೊಂಡು ಪ್ರಾಮಾಣಿಕತೆಯನ್ನು ಮೈಗೂಡಿಸಿಕೊಂಡು ಭವಿಷ್ಯವನ್ನು ರೂಪಿಸಿಕೊಳ್ಳಬೇಕು ಎಂದು ಶುಭಹಾರೈಸಿದರು.

ವಿದ್ಯಾರ್ಥಿ ಸಂಘದ ನಾಯಕ ದೀಕ್ಷಿತ್ ಅಂತಿಮ ಬಿ.ಕಾಂ ಸ್ವಾಗತಿಸಿ , ಫಾತಿಮಾ ಶೀಮಾ ಸಹದಿಯಾ ದ್ವಿತೀಯ ಬಿ.ಕಾಂ ವಂದಿಸಿ , ಅಂತಿಮ ಬಿ.ಕಾಂ ವಿದ್ಯಾರ್ಥಿನಿ ದೀಕ್ಷಾ ಹಾಗೂ ರೇಷ್ಮಾ ಕಾರ್ಯಕ್ರಮ ನಿರೂಪಿಸಿದರು .

ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ವಿವಿಧ ಮನೋರಂಜನಾ ಸ್ಪರ್ಧೆಗಳನ್ನು ಹಮ್ಮಿಕೊಂಡು ರಾಫಿಯಾ ಅಂತಿಮ ಬಿ.ಕಾಂ. ಕಾರ್ಯಕ್ರಮ ಸಂಘಟಿಸಿದರು. ಬೋಧಕ ಬೋಧಕೇತರ ವೃಂದದವರ ಉಪಸ್ಥಿತಿಯಲ್ಲಿ ಕಾರ್ಯಕ್ರಮವು ಸಂಪನ್ನಗೊಂಡಿತು .

Leave a Reply

Your email address will not be published. Required fields are marked *

You May Also Like

ಎಲ್.ಸಿ.ಆರ್ ಇಂಡಿಯನ್ ಪದವಿ ಕಾಲೇಜು ಕಕ್ಯಪದವು 100% ಫಲಿತಾಂಶ

ಕಕ್ಯಪದವು : ಎಲ್.ಸಿ.ಆರ್ ವಿದ್ಯಾಸಂಸ್ಥೆಯ 2023-24 ನೇ ಶೈಕ್ಷಣಿಕ ಸಾಲಿನ ( NEP ) ಮಂಗಳೂರು…

Local Talent Shines Bright: Trisha from Belthangady Selected for DKD Reality Show

Ms. Trisha, talented daughter of Mr. Prashant and Mrs. Shailaja, Guruvayanakere, has…

St. Joseph’s P U College, Bajpe Hosts Students’ Council Inauguration and Investiture Program

Bajpe, 23 June 2025: St. Joseph’s P U College, Bajpe held the…

ಗಾಯನ ಸ್ಪರ್ಧೆಯಲ್ಲಿ ಎಲ್ ಸಿ ಆರ್ ಸಂಸ್ಥೆಯ ವಿದ್ಯಾರ್ಥಿಗಳ ಸಾಧನೆ 

ಇರ್ವತ್ತೂರು, ಆಗಸ್ಟ್ 16, 2024 : ಇರ್ವತ್ತೂರು ಗ್ರಾಮ ಪಂಚಾಯತ್ ನಲ್ಲಿ ಭಾರತ್ ಸ್ಕೌಟ್ಸ್ ಮತ್ತು…