ಕಕ್ಯಪದವು: ಪಾದೆಗುತ್ತು ಲಿಂಗಪ್ಪ ಮಾಸ್ತರ್ ಮೆಮೋರಿಯಲ್ ಎಜುಕೇಶನ್‌ ಟ್ರಸ್ಟ್ ನಡೆಸುತ್ತಿರುವ ಎಲ್.ಸಿ.ಆರ್. ಇಂಡಿಯನ್ ಪದವಿ ಕಾಲೇಜು ಇದರ ವಿದ್ಯಾರ್ಥಿಗಳ ಮತ್ತು ಉಪನ್ಯಾಸಕರ ತಂಡವು ಜಿಲ್ಲಾ ನ್ಯಾಯಾಲಯ ದಕ್ಷಿಣ ಕನ್ನಡ, ಮಂಗಳೂರು ಗೆ ಶೈಕ್ಷಣಿಕ ಭೇಟಿಯನ್ನು ದಿನಾಂಕ 16/02/2026 ರಂದು ಆಯೋಜಿಸಿತು. ಈ ಭೇಟಿಯ ಮುಖ್ಯ ಉದ್ದೇಶ ವಿದ್ಯಾರ್ಥಿಗಳಿಗೆ ನ್ಯಾಯಾಲಯದ ಕಾರ್ಯವಿಧಾನ, ಕಾನೂನು ಪ್ರಕ್ರಿಯೆ ಹಾಗೂ ನ್ಯಾಯನಿರ್ವಹಣೆಯ ಬಗ್ಗೆ ನೇರ ಅನುಭವ ನೀಡುವುದು.

ಭೇಟಿಯ ಸಮಯದಲ್ಲಿ ವಿದ್ಯಾರ್ಥಿಗಳು ನ್ಯಾಯಾಲಯದ ವಿವಿಧ ವಿಭಾಗಗಳನ್ನು ವೀಕ್ಷಿಸಿದರು. ನ್ಯಾಯಾಧೀಶರ ನ್ಯಾಯನಿರ್ವಹಣೆ, ವಕೀಲರ ವಾದ-ಪ್ರತಿವಾದ, ಪ್ರಕರಣಗಳ ವಿಚಾರಣೆ ಮುಂತಾದ ಪ್ರಕ್ರಿಯೆಗಳನ್ನು ಗಮನಿಸಿದರು. ಇದರಿಂದ ವಿದ್ಯಾರ್ಥಿಗಳಿಗೆ ನ್ಯಾಯಾಂಗ ವ್ಯವಸ್ಥೆಯ ಬಗ್ಗೆ ಉತ್ತಮ ತಿಳುವಳಿಕೆ ದೊರೆಯಿತು.
ಈ ಶೈಕ್ಷಣಿಕ ಭೇಟಿ ವಿದ್ಯಾರ್ಥಿಗಳಲ್ಲಿ ಕಾನೂನು ಜ್ಞಾನ, ಸಾಮಾಜಿಕ ಜವಾಬ್ದಾರಿ ಹಾಗೂ ನ್ಯಾಯದ ಮಹತ್ವದ ಬಗ್ಗೆ ಅರಿವು ಮೂಡಿಸಿತು. ಇಂತಹ ಕಾರ್ಯಕ್ರಮಗಳು ವಿದ್ಯಾರ್ಥಿಗಳ ಪ್ರಾಯೋಗಿಕ ಜ್ಞಾನವನ್ನು ಹೆಚ್ಚಿಸಲು ಸಹಾಯಕವಾಗಿವೆ. ಈ ಶೈಕ್ಷಣಿಕ ಅಧ್ಯಯನದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಜೋಸ್ಟನ್ ಲೋಬೋ, ಸಂಸ್ಥೆಯ ಸಂಯೋಜಕರಾದ ಯಶವಂತ ಜಿ ನಾಯಕ್ ಹಾಗೂ ವಿಭಾಗದ ಮುಖ್ಯಸ್ಥರಾದ ದೀಕ್ಷಿತಾ ಹಾಗೂ ಉಪನ್ಯಾಸಕರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

You May Also Like

ಎಲ್.ಸಿ.ಆರ್ ಇಂಡಿಯನ್ ಪದವಿ ಕಾಲೇಜು ಕಕ್ಯಪದವು 100% ಫಲಿತಾಂಶ

ಕಕ್ಯಪದವು : ಎಲ್.ಸಿ.ಆರ್ ವಿದ್ಯಾಸಂಸ್ಥೆಯ 2023-24 ನೇ ಶೈಕ್ಷಣಿಕ ಸಾಲಿನ ( NEP ) ಮಂಗಳೂರು…

Local Talent Shines Bright: Trisha from Belthangady Selected for DKD Reality Show

Ms. Trisha, talented daughter of Mr. Prashant and Mrs. Shailaja, Guruvayanakere, has…

St. Joseph’s P U College, Bajpe Hosts Students’ Council Inauguration and Investiture Program

Bajpe, 23 June 2025: St. Joseph’s P U College, Bajpe held the…

ಗಾಯನ ಸ್ಪರ್ಧೆಯಲ್ಲಿ ಎಲ್ ಸಿ ಆರ್ ಸಂಸ್ಥೆಯ ವಿದ್ಯಾರ್ಥಿಗಳ ಸಾಧನೆ 

ಇರ್ವತ್ತೂರು, ಆಗಸ್ಟ್ 16, 2024 : ಇರ್ವತ್ತೂರು ಗ್ರಾಮ ಪಂಚಾಯತ್ ನಲ್ಲಿ ಭಾರತ್ ಸ್ಕೌಟ್ಸ್ ಮತ್ತು…