ಕಕ್ಯಪದವು: ಪಾದೆಗುತ್ತು ಲಿಂಗಪ್ಪ ಮಾಸ್ಟರ್ ಮೆಮೋರಿಯನ್ ಎಜುಕೇಶನ್ ಟ್ರಸ್ಟ್ (ರಿ ) ನಿಂದ ನಡೆಸಲ್ಪಡುವ ಎಲ್.ಸಿ ಆರ್ ಇಂಡಿಯನ್ ವಿದ್ಯಾಸಂಸ್ಥೆಯಲ್ಲಿ ವ್ಯಸನ ಮುಕ್ತ ಜಾಗೃತಿ ಕಾರ್ಯಕ್ರಮ ವನ್ನು ಜಾಥಾದ ಮೂಲಕ ಕಾರ್ಯಕ್ರಮವನ್ನು ಪ್ರಾರಂಭಿಸಲಾಯಿತು.

ಈ ಜಾಥವನ್ನು ನಮ್ಮ ವಿದ್ಯಾಸಂಸ್ಥೆಯ ಪ್ರಾಂಶುಪಾಲರಾದ ಜೋಸ್ಟನ್ ಲೋಬೋ , ಸಂಯೋಜಕರಾದ ಯಶವಂತ್ ಜಿ ನಾಯಕ್ ಮತ್ತು ಪ್ರಾಥಮಿಕ ಹಾಗೂ ಪ್ರೌಢ ವಿಭಾಗದ ಮುಖ್ಯೋಪಾಧ್ಯಾಯಿನಿ ಶ್ರೀಮತಿ ವಿಜಯ ಕೆ ಇವರು ಈ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಎಲ್ . ಸಿ ಆರ್ ವಿದ್ಯಾಸಂಸ್ಥೆಯಿಂದ ಕಕ್ಯಪದವಿನ ಉಳಿಗ್ರಾಮ ಪಂಚಾಯತ್ ರವರೆಗೆ ಜಾಥಾ ಕಾರ್ಯಕ್ರಮ ವನ್ನು ಘೋಷ ವಾಕ್ಯದೊಂದಿಗೆ ಜಾಗೃತಿಯನ್ನು ಮೂಡಿಸಲಾಯಿತು. ಹಾಗೂ ಇದಕ್ಕೆ ಸಂಬಂಧಿಸಿದ ಕಿರುಚಿತ್ರವನ್ನು ವಿದ್ಯಾರ್ಥಿಗಳಿಗೆ ಪ್ರದರ್ಶಿಸಿ ಅದರ ಮಾದಕ ವ್ಯಸನದ ಆಗೂ ಹೋಗುಗಳ ಕುರಿತು ಎಲ್ಲಾ ವಿದ್ಯಾರ್ಥಿಗಳಿಗೆ ಮನವರಿಕೆ ಮಾಡಿಸಲಾಯಿತು. ನಂತರ ಎಲ್ಲಾ ವಿದ್ಯಾರ್ಥಿಗಳಿಗೆ ಮಾದಕ ವ್ಯಸನದಿಂದ ಮುಕ್ತರಾಗಿ ಉತ್ತಮವಾದ ಜೀವನ ಶೈಲಿ ರೂಪುಗೊಳ್ಳಬೇಕಾದರೆ ವಿದ್ಯಾರ್ಥಿಗಳಾದ ನೀವು ಇಂತಹ ಮಾದಕ ವಸ್ತುಗಳಿಂದ ದೂರವಿದ್ದಲ್ಲಿ ಉತ್ತಮ ಜೀವನ ಸಾಧ್ಯ ಎಂದು ಪ್ರಾಥಮಿಕ ವಿಭಾಗದ ಸಹ ಶಿಕ್ಷಕರಾದ ಪ್ರಶಾಂತ್ . ಕೆ ತಿಳಿಸಿದರು . ಮತ್ತು ಕೆಲವು ವಿದ್ಯಾರ್ಥಿಗಳು ಈ ಕಾರ್ಯಕ್ರಮದ ಕುರಿತು ಅಭಿಪ್ರಾಯಗಳನ್ನು ಹಂಚಿಕೊಂಡರು. ಈ ಕಾರ್ಯಕ್ರಮವನ್ನು ಸಹ ಶಿಕ್ಷಕಿಯಾದ ಸಂಗೀತ ಇವರು ನಿರೂಪಿಸಿ ವಂದಿಸಿದರು. ಎಲ್ಲಾ ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಉತ್ಸಾಹದಿಂದ ಕಾರ್ಯಕ್ರಮದಲ್ಲಿ ಭಾಗವಹಿಸಿದರು . ಈ ಕಾರ್ಯಕ್ರಮವು ಯಶಸ್ವಿ ಯಾಗಿ ನೆರವೇರಿತು.

Leave a Reply

Your email address will not be published. Required fields are marked *

You May Also Like

ಎಲ್.ಸಿ.ಆರ್ ಇಂಡಿಯನ್ ಪದವಿ ಕಾಲೇಜು ಕಕ್ಯಪದವು 100% ಫಲಿತಾಂಶ

ಕಕ್ಯಪದವು : ಎಲ್.ಸಿ.ಆರ್ ವಿದ್ಯಾಸಂಸ್ಥೆಯ 2023-24 ನೇ ಶೈಕ್ಷಣಿಕ ಸಾಲಿನ ( NEP ) ಮಂಗಳೂರು…

Local Talent Shines Bright: Trisha from Belthangady Selected for DKD Reality Show

Ms. Trisha, talented daughter of Mr. Prashant and Mrs. Shailaja, Guruvayanakere, has…

St. Joseph’s P U College, Bajpe Hosts Students’ Council Inauguration and Investiture Program

Bajpe, 23 June 2025: St. Joseph’s P U College, Bajpe held the…

ಗಾಯನ ಸ್ಪರ್ಧೆಯಲ್ಲಿ ಎಲ್ ಸಿ ಆರ್ ಸಂಸ್ಥೆಯ ವಿದ್ಯಾರ್ಥಿಗಳ ಸಾಧನೆ 

ಇರ್ವತ್ತೂರು, ಆಗಸ್ಟ್ 16, 2024 : ಇರ್ವತ್ತೂರು ಗ್ರಾಮ ಪಂಚಾಯತ್ ನಲ್ಲಿ ಭಾರತ್ ಸ್ಕೌಟ್ಸ್ ಮತ್ತು…