ಕಕ್ಯಪದವು : ಪಾದೆಗುತ್ತು ಲಿಂಗಪ್ಪ ಮಾಸ್ಟರ್ ಮೆಮೋರಿಯಲ್ ಎಜುಕೇಶನ್ ಟ್ರಸ್ಟ್ ನಡೆಸುತ್ತಿರುವ ಎಲ್.ಸಿ.ಆರ್ ಇಂಡಿಯನ್ ಪದವಿ ಕಾಲೇಜಿನಲ್ಲಿ ದಿನಾಂಕ 14/05/2026 ರಂದು ವಿದ್ಯಾರ್ಥಿಗಳಿಗಾಗಿ ಸಾಂಪ್ರದಾಯಿಕ ದಿನಾಚರಣೆಯನ್ನು ವಿಜೃಂಭಣೆಯಿಂದ ಆಚರಿಸಲಾಯಿತು.

ಕಾರ್ಯಕ್ರಮವು ದೀಪ ಬೆಳಗಿಸುವುದರ ಮೂಲಕ ಆರಂಭವಾಯಿತು. ವಿದ್ಯಾರ್ಥಿಗಳಲ್ಲಿ ಭಾರತೀಯ ಸಂಸ್ಕೃತಿ, ಸಂಪ್ರದಾಯ, ಐಕ್ಯತೆ ಹಾಗೂ ಸೃಜನಾತ್ಮಕತೆಯನ್ನು ಬೆಳೆಸುವ ಉದ್ದೇಶದಿಂದ ಅಂತಿಮ ವಿಭಾಗದ “ಪವರ್ ಸ್ಟ್ರೈಕರ್ಸ್” ವಿದ್ಯಾರ್ಥಿ ತಂಡವು ವಿವಿಧ ಚಟುವಟಿಕೆಗಳನ್ನು ನಡೆಸಿಕೊಟ್ಟು ಕಾರ್ಯಕ್ರಮವನ್ನು ಯಶಸ್ವಿಗೊಳಿಸಿತು.
ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಸಾಂಪ್ರದಾಯಿಕ ಉಡುಪು ಧರಿಸಿ ಭಾರತೀಯ ಪರಂಪರೆಯ ವೈಭವವನ್ನು ಅನಾವರಣಗೊಳಿಸಿದರು. ವಿವಿಧ ಮನರಂಜನಾ ಚಟುವಟಿಕೆಗಳು ಹಾಗೂ ಆಟಗಳು ವಿದ್ಯಾರ್ಥಿಗಳಲ್ಲಿ ಉತ್ಸಾಹ ಮತ್ತು ಸಂಭ್ರಮವನ್ನು ಹೆಚ್ಚಿಸಿತು.

ವಿದ್ಯಾರ್ಥಿಗಳು ಉತ್ಸಾಹದಿಂದ ಕಾರ್ಯಕ್ರಮದಲ್ಲಿ ಭಾಗವಹಿಸಿ ದಿನಾಚರಣೆಯನ್ನು ನೆನಪಿನ ಕ್ಷಣವನ್ನಾಗಿ ಮಾಡಿದರು. ಕಾರ್ಯಕ್ರಮದಲ್ಲಿ ಸಂಸ್ಥೆಯ ಪ್ರಾಂಶುಪಾಲರಾದ ಜೋಸ್ಟನ್ ಲೋಬೊ, ಸಂಯೋಜಕರಾದ ಯಶವಂತ್ ಜಿ ನಾಯಕ್ ವಿಭಾಗದ ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳು ಭಾಗವಹಿಸಿ ದಿನಾಚರಣೆಯನ್ನು ಇನ್ನಷ್ಟು ವಿಶೇಷಗೊಳಿಸಿದರು.
ಪ್ರಥಮ ಬಿ.ಕಾಂ ವಿದ್ಯಾರ್ಥಿನಿ ರಫೀದಾ ಸ್ವಾಗತಿಸಿ,ಅಪೇಕ್ಷಾ ದ್ವಿತೀಯ ಬಿ.ಕಾಂ ವಂದಿಸಿದರು. ಸುಪ್ರಿಯಾ ತೃತೀಯ ಬಿಕಾಂ ಕಾರ್ಯಕ್ರಮ ನಿರೂಪಿಸಿದರು.

Leave a Reply

Your email address will not be published. Required fields are marked *

You May Also Like

ಎಲ್.ಸಿ.ಆರ್ ಇಂಡಿಯನ್ ಪದವಿ ಕಾಲೇಜು ಕಕ್ಯಪದವು 100% ಫಲಿತಾಂಶ

ಕಕ್ಯಪದವು : ಎಲ್.ಸಿ.ಆರ್ ವಿದ್ಯಾಸಂಸ್ಥೆಯ 2023-24 ನೇ ಶೈಕ್ಷಣಿಕ ಸಾಲಿನ ( NEP ) ಮಂಗಳೂರು…

Local Talent Shines Bright: Trisha from Belthangady Selected for DKD Reality Show

Ms. Trisha, talented daughter of Mr. Prashant and Mrs. Shailaja, Guruvayanakere, has…

St. Joseph’s P U College, Bajpe Hosts Students’ Council Inauguration and Investiture Program

Bajpe, 23 June 2025: St. Joseph’s P U College, Bajpe held the…

ಗಾಯನ ಸ್ಪರ್ಧೆಯಲ್ಲಿ ಎಲ್ ಸಿ ಆರ್ ಸಂಸ್ಥೆಯ ವಿದ್ಯಾರ್ಥಿಗಳ ಸಾಧನೆ 

ಇರ್ವತ್ತೂರು, ಆಗಸ್ಟ್ 16, 2024 : ಇರ್ವತ್ತೂರು ಗ್ರಾಮ ಪಂಚಾಯತ್ ನಲ್ಲಿ ಭಾರತ್ ಸ್ಕೌಟ್ಸ್ ಮತ್ತು…