ಕಕ್ಯಪದವು: ಪಾದೆಗುತ್ತು ಲಿಂಗಪ್ಪ ಮಾಸ್ಟರ್ ಮೆಮೋರಿಯಲ್ ಎಜುಕೇಶನ್ ಟ್ರಸ್ಟ್ (ರಿ) ನಿಂದ ನಡೆಸಲ್ಪಡುವ ಎಲ್ ಸಿ ಆರ್ ಇಂಡಿಯನ್ ವಿದ್ಯಾಸಂಸ್ಥೆಯಲ್ಲಿ ಜನವರಿ 26 ರಂದು 77ನೇ ಗಣರಾಜ್ಯೋತ್ಸವವನ್ನು ಆಚರಿಸಲಾಯಿತು.
ಸಂಸ್ಥೆಯ ಸಂಯೋಜಕರಾದ ಯಶವಂತ್ ಜಿ ನಾಯಕ್ ಹಾಗೂ ಬೋಧಕ-ಬೋಧಕೇತರ ಸಿಬ್ಬಂದಿ ವರ್ಗದವರ ಸಮ್ಮುಖದಲ್ಲಿ ಸಂಸ್ಥೆಯ ಪ್ರಾಥಮಿಕ ಹಾಗೂ ಪ್ರೌಢ ವಿಭಾಗದ ಮುಖ್ಯೋಪಾಧ್ಯಾಯರಾದ ಶ್ರೀಮತಿ ವಿಜಯ ಕೆ ಧ್ವಜಾರೋಹಣ ಕಾರ್ಯಕ್ರಮವನ್ನು ನೆರವೇರಿಸಿ, ವಿದ್ಯಾರ್ಥಿಗಳಿಗೆ ಗಣರಾಜ್ಯೋತ್ಸವ ಆಚರಣೆಯ ಮಹತ್ವ ಹಾಗೂ ಶುಭಾಶಯಗಳನ್ನು ತಿಳಿಸಿದರು.
ತದನಂತರ ನೆರೆದಿದ್ದ ಎಲ್ಲರಿಗೂ ಸಿಹಿ ಹಂಚಲಾಯಿತು.ಈ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಹಾಗೂ ಪೋಷಕರು ಉಪಸ್ಥಿತರಿದ್ದರು.ಸಂಸ್ಥೆಯ ದೈಹಿಕ ಶಿಕ್ಷಣ ಶಿಕ್ಷಕಿ ಶ್ರೀಮತಿ ಹರಿಣಾಕ್ಷಿ ಕಾರ್ಯಕ್ರಮ ನಿರೂಪಿಸಿ ಎಲ್ಲರನ್ನೂ ಸ್ವಾಗತಿಸಿ,ವಂದಿಸಿದರು.