ಕಕ್ಯಪದವು: ಪಾದೆಗುತ್ತು ಲಿಂಗಪ್ಪ ಮಾಸ್ತರರ ಎಜುಕೇಷನಲ್ ಟ್ರಸ್ಟ್ ( ರಿ.)ನಿಂದ ನಡೆಸಲ್ಪಡುವ ಎಲ್.ಸಿ.ಆರ್. ಇಂಡಿಯನ್ ವಿದ್ಯಾಸಂಸ್ಥೆಗಳು ಕಕ್ಯಪದವು ಇಲ್ಲಿನ ಪೂರ್ವ ಪ್ರಾಥಮಿಕ, ಪ್ರಾಥಮಿಕ,ಪೌಢ ಹಾಗೂ ಪದವಿಪೂರ್ವ, ಪದವಿ ವಿಭಾಗ ಮತ್ತು ರಾಷ್ಟ್ರೀಯ ಸೇವಾ ಯೋಜನಾ ಘಟಕದ ಸಹಯೋಗದಲ್ಲಿ ವತಿಯಿಂದ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಗಸ್ಟ್ 15, 2026ರಂದು ಸಂಭ್ರಮ ಹಾಗೂ ದೇಶಭಕ್ತಿಯ ವಾತಾವರಣದಲ್ಲಿ ಆಚರಿಸಲಾಯಿತು.
ಕಾರ್ಯಕ್ರಮದಲ್ಲಿ ಸಂಸ್ಥೆಯ ಸಂಚಾಲಕರಾದ ಶ್ರೀಮತಿ ಬಬಿತಾ ರೋಹಿನಾಥ್ ಅವರು ಧ್ವಜಾರೋಹಣ ನೆರವೇರಿಸಿದರು. ಕಾರ್ಯದರ್ಶಿಗಳಾದ ಶ್ರೀಮತಿ ಶಿವಾನಿ ಆರ್. ನಾಥ್, ಟ್ರಸ್ಟಿಗಳಾದ ಶ್ರೀ ಯಜ್ಞೇಶ್ ರಾಜ್ , ಪ್ರಾಂಶುಪಾಲರಾದ ಜೋಸ್ಟನ್ ಲೋಬೋ ಹಾಗೂ ಸಂಯೋಜಕರಾದ ಯಶವಂತ್ ಜಿ. ನಾಯಕ್ ಅವರು ಉಪಸ್ಥಿತರಿದ್ದರು.
ಮುಖ್ಯೋಪಾಧ್ಯಾಯಿನಿ ಶ್ರೀಮತಿ ವಿಜಯಾ.ಕೆ ಮಾತನಾಡಿ ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ, ಬಲಿದಾನ ಮತ್ತು ದೇಶದ ಸ್ವಾತಂತ್ರ್ಯದ ಮಹತ್ವವನ್ನು ಸ್ಮರಿಸಲಾಯಿತು. ಧ್ವಜಾರೋಹಣದ ಬಳಿಕ ರಾಷ್ಟ್ರಗೀತೆ ಮೊಳಗಿಸಲಾಯಿತು. ವಿದ್ಯಾರ್ಥಿಗಳು ದೇಶಭಕ್ತಿ ಗೀತೆಗಳು ಹಾಗೂ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳ ಮೂಲಕ ಸ್ವಾತಂತ್ರ್ಯ ದಿನಾಚರಣೆಯ ಮಹತ್ವವನ್ನು ಸಾರಿದರು.ವಿದ್ಯಾರ್ಥಿಗಳು ದೇಶದ ಏಕತೆ, ಶಾಂತಿ ಮತ್ತು ಪ್ರಗತಿಗಾಗಿ ತಮ್ಮ ಕರ್ತವ್ಯಗಳನ್ನು ನಿಷ್ಠೆಯಿಂದ ನಿರ್ವಹಿಸುವ ಸಂಕಲ್ಪ ಮಾಡಿದರು.
ಶ್ರೀಮತಿ ಜಯಶ್ರೀ ವಾಣಿಜ್ಯ ಶಾಸ್ತ್ರ ಉಪನ್ಯಾಸಕಿ ಸ್ವಾಗತಿಸಿ, ಸಹಶಿಕ್ಷಕಿ ಕುಶಲಾ ಟಿ. ಸಹಶಿಕ್ಷಕಿ ಸಂಗೀತಾ ಕಾರ್ಯಕ್ರಮ ನಿರೂಪಿಸಿದರು. ದೇಶಭಕ್ತಿ ಹಾಗೂ ಹೆಮ್ಮೆಯ ಭಾವನೆಯ ಘೋಷವಾಕ್ಯದೊಂದಿಗೆ ಯಶಸ್ವಿಯಾಗಿ ನೆರವೇರಿತು.