ಕಕ್ಯಪದವು: ಪಾದೆಗುತ್ತು ಲಿಂಗಪ್ಪ ಮಾಸ್ತರ್ ಎಜುಕೇಷನಲ್ ಟ್ರಸ್ಟ್ (ರಿ). ನಿಂದ ನಡೆಸಲ್ಪಡುವ ಎಲ್.ಸಿ.ಆರ್. ಇಂಡಿಯನ್ ವಿದ್ಯಾಸಂಸ್ಥೆ, ಕಕ್ಯಪದವು ಇಲ್ಲಿನ ಎಲ್.ಸಿ.ಆರ್.ಇಂಡಿಯನ್ ಪದವಿ ಪೂರ್ವ ಹಾಗೂ ಪದವಿ ಕಾಲೇಜು ಹಾಗೂ ರಾಷ್ಟ್ರೀಯ ಸೇವಾ ಯೋಜನಾ ಘಟಕದ ವತಿಯಿಂದ ಕೆಸರು ಗದ್ದೆ – ಗ್ರಾಮ್ಯ-ಗಮ್ಮತ್ತು ಕಾರ್ಯಕ್ರಮವನ್ನು ಆಗಸ್ಟ್ 13ರಂದು ಪ್ರಗತಿಪರ ಕೃಷಿಕರಾದ ಶ್ರೀಯುತ ವಿಠಲ ಭಂಡಾರಿ ಪುಣ್ಕೆದಡಿ , ಕಕ್ಯಪದವು ಇವರ ಗದ್ದೆಯಲ್ಲಿ ಆಯೋಜಿಸಲಾಯಿತು.
ಕಾರ್ಯಕ್ರಮದ ಉದ್ಘಾಟನೆಯನ್ನು ಶ್ರೀ ಯುತ ಚೇತನ್ ಊರ್ದೊಟ್ಟು ,ಅಧ್ಯಕ್ಷರು ಹಾಲು ಉತ್ಪಾದಕರ ಸಹಕಾರಿ ಸಂಘ(ರಿ). ಇವರು ಉದ್ಘಾಟಿಸಿ, ತುಳುವ ಮಣ್ಣಿನ ಸಂಸ್ಕೃತಿಯನ್ನು ಉಳಿಸುವ ಗ್ರಾಮ್ಯ ಸೊಗಡು ಇಂತಹ ಕೆಸರುಗದ್ದೆಯ ಕೂಟದಲ್ಲಿ ವಿದ್ಯಾರ್ಥಿಗಳಲ್ಲಿ ಅರಳಲು ಸಾಧ್ಯ ಹಾಗೂ ಕೃಷಿ ಸಂಸ್ಕೃತಿಯನ್ನು ಉಳಿಸಬೇಕು ಎಂದರು.

ಗೌರವ ಉಪಸ್ಥಿತರಿದ್ದ ಶ್ರೀಯುತ ಸಿತಾರ್ ಆರ್.ಭಂಡಾರಿ ಇವರು ಮಾತನಾಡಿ ತುಳುನಾಡಿನ ಕಾರ್ಯಕ್ರಮಗಳಲ್ಲಿ ವಿದ್ಯಾರ್ಥಿಗಳು ಭಾಗವಹಿಸಿ ದಾಗ ತುಳು ಸಂಸ್ಕೃತಿ ಮತ್ತು ಕೃಷಿ ಸಂಸ್ಕೃತಿಯ ಅರಿವು ಮೂಡಲು ಸಾಧ್ಯ ಎಂದರು.
ಕಾರ್ಯಕ್ರಮದಲ್ಲಿ ಶ್ರೀಯುತ ವಿಠಲ ಭಂಡಾರಿ, ಶ್ರೀಯುತ ರಾಮಯ್ಯ ಭಂಡಾರಿ, ಶ್ರೀಯುತ ಗೋಪಾಲ ಭಂಡಾರಿ, ಶ್ರೀಯುತ ಲಕ್ಷ್ಮಣ ಭಂಡಾರಿ ಪ್ರಗತಿಪರ ಕೃಷಿಕರು ಪುಣ್ಕೆದಡಿ ,ಶ್ರೀಯುತ ಅಕ್ಬರ್ ಆಲಿ ಸಹಶಿಕ್ಷಕರು ದ.ಕ.ಜಿ.ಪಂ.ಹಿರಿಯ ಪ್ರಾಥಮಿಕ ಶಾಲೆ ಉಳಿಬೈಲು ಇವರು ಉಪಸ್ಥಿತರಿದ್ದರು.
ಎಲ್.ಸಿ.ಆರ್. ಇಂಡಿಯನ್ ವಿದ್ಯಾಸಂಸ್ಥೆಯ ಅಧ್ಯಕ್ಷರಾದ ಶ್ರೀಮತಿ ಬಬಿತಾ ಆರ್. ನಾಯಕ್ ಅಧ್ಯಕ್ಷತೆ ವಹಿಸಿದ್ದರು. ಸಂಸ್ಥೆಯ ಕಾರ್ಯದರ್ಶಿಗಳಾದ ಶ್ರೀಮತಿ ಶಿವಾನಿ ಆರ್ ನಾಥ್ ಘನ ಉಪಸ್ಥಿತರಿದ್ದರು. ಸಂಸ್ಥೆಯ ಸಂಯೋಜಕರಾದ ಶ್ರೀ ಯುತ ಯಶವಂತ ಜಿ.ನಾಯಕ್, ಮುಖ್ಯೋಪಾಧ್ಯಾಯಿನಿ ಶ್ರೀಮತಿ ವಿಜಯಾ.ಕೆ ವೇದಿಕೆಯನ್ನು ಅಲಂಕರಿಸಿದ್ದರು.
ಪ್ರಾಂಶುಪಾಲರಾದ ಶ್ರೀಯುತ ಜೋಸ್ಟನ್ ಲೋಬೊ ಅಧ್ಯಕ್ಷೀಯ ಮಾತುಗಳನ್ನಾಡಿ ಶುಭಹಾರೈಸಿದರು.
ರಾಷ್ಟ್ರೀಯ ಸೇವಾ ಯೋಜನಾ ಘಟಕದ ಯೋಜನಾಧಿಕಾರಿಯಾದ ವಿಂದ್ಯಾಶ್ರೀ. ಎ ಸ್ವಾಗತಿಸಿ, ವಾಣಿಜ್ಯ ಉಪನ್ಯಾಸಕ ಮನೋಜ್ ವಂದಿಸಿ, ದೈಹಿಕ ಶಿಕ್ಷಣ ನಿರ್ದೇಶಕರಾದ ಶ್ರೀಯುತ ಪೃಥ್ವಿ ರಾಜ್ ಕಾರ್ಯಕ್ರಮ ನಿರೂಪಿಸಿದರು.
ವಿದ್ಯಾರ್ಥಿಗಳು ಹಾಗೂ ಉಪನ್ಯಾಸಕರು ಉತ್ಸಾಹದಿಂದ ಭಾಗವಹಿಸಿ ಕೆಸರಿನ ಆಟಗಳು ಸೇರಿದಂತೆ ವಿವಿಧ ಗ್ರಾಮೀಣ ಕ್ರೀಡೆಗಳಲ್ಲಿ ಪಾಲ್ಗೊಂಡರು. ಈ ಮೂಲಕ ವಿದ್ಯಾರ್ಥಿಗಳಲ್ಲಿ ಸಹಕಾರ, ಸ್ನೇಹ, ಕ್ರೀಡಾಸ್ಫೂರ್ತಿ ಹಾಗೂ ತುಳುನಾಡಿನ ಸಾಂಸ್ಕೃತಿಕ ಪರಂಪರೆಯ ಅರಿವು ಮೂಡಿಸಲಾಯಿತು.
ಕಾರ್ಯಕ್ರಮದ ಅಂಗವಾಗಿ ವಿದ್ಯಾರ್ಥಿಗಳಿಗೆ ಮನರಂಜನೆಯ ಜೊತೆಗೆ ಗ್ರಾಮೀಣ ಜೀವನಶೈಲಿ ಮತ್ತು ಕೃಷಿ ಸಂಸ್ಕೃತಿಯ ಮಹತ್ವವನ್ನು ಪರಿಚಯಿಸಲಾಯಿತು. ಕಾರ್ಯಕ್ರಮವು ವಿದ್ಯಾರ್ಥಿಗಳಲ್ಲಿ ಹೊಸ ಉತ್ಸಾಹ ಹಾಗೂ ಸಂತಸವನ್ನು ಮೂಡಿಸಿತು.