ಕಕ್ಯಪದವು, 26 ಜೂನ್ 2025: ಪಾದೆಗುತ್ತು ಲಿಂಗಪ್ಪ ಮಾಸ್ತರ್ ಎಜುಕೇಷನಲ್ ಟ್ರಸ್ಟ್ (ರಿ).ನಿಂದ ನಡೆಸಲ್ಪಡುವ ಎಲ್.ಸಿ.ಆರ್ ಇಂಡಿಯನ್ ವಿದ್ಯಾಸಂಸ್ಥೆಯ ವದವಿಪೂರ್ವ ವಿಭಾಗದಲ್ಲಿ ನಶಾಮುಕ್ತ ಭಾರತ ಅಭಿಯಾನದ ಪ್ರಯುಕ್ತ “ಮಾದಕ ವಸ್ತುಗಳ ದುರುಪಯೋಗ ಮತ್ತು ಅಕ್ರಮ ಕಳ್ಳಸಾಗಣೆ ವಿರುದ್ಧ ಅಂತರಾಷ್ಟ್ರೀಯ ದಿನದ ಆಚರಣೆಯ” ಅಂಗವಾಗಿ ಮಾದಕ ವಸ್ತು ಸೇವನೆ ಮಾಡದಿರಲು ಪ್ರತಿಜ್ಞೆ ಸ್ವೀಕರಿಸಲಾಯಿತು.

ವಿದ್ಯಾಸಂಸ್ಥೆಯ ಪ್ರಾಂಶುಪಾಲರಾದ ಶ್ರೀಯುತ ಜೋಸ್ಟನ್ ಲೋಬೊ, ಸಂಯೋಜಕರಾದ ಶ್ರೀಯುತ ಯಶವಂತ್ ಜಿ ನಾಯಕ್, ಪದವಿ ವಿಭಾಗದ ಮುಖ್ಯಸ್ಥೆಯಾದ ಶ್ರೀಮತಿ ದೀಕ್ಷಿತಾ , ಪದವಿ ಪೂರ್ವ ವಿಭಾಗದ ಮುಖ್ಯಸ್ಥೆಯಾದ ಶ್ರೀಮತಿ ಸೌಮ್ಯ ಎನ್ ಹಾಗೂ ಉಪನ್ಯಾಸಕರು ಉಪಸ್ಥಿತರಿದ್ದರು.ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಶ್ರೀಮತಿ ವಿಂದ್ಯಾಶ್ರೀ ಪ್ರತಿಜ್ಞಾ ವಿಧಿಯನ್ನು ನಡೆಸಿಕೊಟ್ಟರು.