ಕಕ್ಯಪದವು, 20 ಜೂನ್ 2025: ಪಾದೆಗುತ್ತು ಲಿಂಗಪ್ಪ ಮಾಸ್ತರ್ ಮೆಮೋರಿಯಲ್ ಎಜುಕೇಷನಲ್ ಟ್ರಸ್ಟ್ (ರಿ) ನಿಂದ ನಡೆಸಲ್ಪಡುವ ಎಲ್ ಸಿ ಆರ್ ಇಂಡಿಯನ್ ವಿದ್ಯಾಸಂಸ್ಥೆ ಕಕ್ಯಪದವು, ಇಲ್ಲಿನ ಪದವಿ ಪೂರ್ವ ವಿಭಾಗದ ವಿದ್ಯಾರ್ಥಿಗಳಿಗೆ ಲಭ್ಯವಿರುವ ವಿವಿಧ ವಿದ್ಯಾರ್ಥಿ ವೇತನದ ಬಗ್ಗೆ ಮಾಹಿತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ನಿವೃತ್ತ ಶಿಕ್ಷಕರು ನಾರಾಯಣ ನಾಯ್ಕ ಸಿದ್ಧಕಟ್ಟೆ ಇವರು ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನದ ಬಗ್ಗೆ ಮಾಹಿತಿಯನ್ನು ನೀಡಿದರು.
ಸಂಸ್ಥೆಯ ಪ್ರಾಂಶುಪಾಲರಾದ ಜೋಸ್ಟನ್ ಲೋಬೋ, ಸಂಯೋಜಕರಾದ ಯಶವಂತ್ ಜಿ ನಾಯಕ್, ಪದವಿ ವಿಭಾಗದ ಮುಖ್ಯಸ್ಥೆಯಾದ ದೀಕ್ಷಿತಾ , ಪದವಿ ಪೂರ್ವ ವಿಭಾಗದ ಮುಖ್ಯಸ್ಥೆಯಾದ ಸೌಮ್ಯ. ಎನ್ ವಿದ್ಯಾರ್ಥಿ ಕ್ಷೇಮ ಪಾಲನಾಧಿಕಾರಿ ವಿಂದ್ಯಾಶ್ರೀ, ಹಾಗೂ ಉಪನ್ಯಾಸಕ ವೃಂದದವರ ಸಹಕಾರದಿಂದ ಕಾರ್ಯಕ್ರಮವು ಯಶಸ್ವಿಯಾಗಿ ಪೂರ್ಣಗೊಂಡಿತು.