ಕಕ್ಯಪದವು : ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕರ ಕಚೇರಿ ಮಂಗಳೂರು ದಕ ಕ್ಷೇತ್ರ ಶಿಕ್ಷಣಾಧಿಕಾರಿಯವರ ಕಛೇರಿ ಪುತ್ತೂರು ಮತ್ತು ಇಂದ್ರಪ್ರಸ್ಥ ವಿದ್ಯಾಲಯ ಉಪ್ಪಿನಂಗಡಿ ಪುತ್ತೂರು ಇವರ ಸಂಯುಕ್ತ ಆಶ್ರಯದಲ್ಲಿ 14/17 ವರ್ಷದ ವಯೋಮಿತಿ ಯೊಳಗಿನ ಜಿಲ್ಲಾ ಮಟ್ಟದ ಪ್ರಾಥಮಿಕ ಮತ್ತು ಪ್ರೌಢ ವಿಭಾಗದ ಚೆಸ್ ಪಂದ್ಯಾಟ ವನ್ನು 28.08 .2026 ರಂದು ಇಂದ್ರ ಪ್ರಸ್ಥ ವಿದ್ಯಾಲಯ ಉಪ್ಪಿನಂಗಡಿಯಲ್ಲಿ ನಡೆಸಲಾಯಿತು.
ನಮ್ಮ ಎಲ್. ಸಿ.ಆರ್ ವಿದ್ಯಾಸಂಸ್ಥೆಯ ಪ್ರಾಥಮಿಕ ವಿಭಾಗದ 7ನೇ ತರಗತಿಯ ವಿದ್ಯಾರ್ಥಿ, ಇವರು ಶ್ರೀ ಎಂ ಚಂದ್ರಹಾಸ ಶೆಟ್ಟಿ ಮತ್ತು ಶ್ರೀಮತಿ ವಿನಯ ರೈ ದಂಪತಿಗಳ ಪುತ್ರನಾದ ನಮನ್ ಸಿ ಶೆಟ್ಟಿ ಇವರು ಜಿಲ್ಲಾ ಮಟ್ಟದ ಚೆಸ್ ಪಂದ್ಯಾಟದಲ್ಲಿ ಭಾಗವಹಿಸಿ ತೃತೀಯ ಸ್ಥಾನ ಗಳಿಸಿ ಕೊಪ್ಪಳದಲ್ಲಿ ನಡೆಯುವ ರಾಜ್ಯಮಟ್ಟದ ಚೆಸ್ ಪಂದ್ಯಾಟಕ್ಕೆ ಆಯ್ಕೆ ಯಾಗಿ ಶಾಲೆಗೆ ಕೀರ್ತಿ ತಂದಿದ್ದಾರೆ.
ಇವರಿಗೆ ನಮ್ಮ ಶಾಲೆಯ ದೈಹಿಕ ಶಿಕ್ಷಕಿಯಾದ ಹರಿಣಾಕ್ಷಿ ಇವರು ತರಬೇತಿಯನ್ನು ನೀಡಿರುತ್ತಾರೆ
ವಿಜೇತ ವಿದ್ಯಾರ್ಥಿ ಯನ್ನು ಸಂಸ್ಥೆಯ , ಆಡಳಿತ ಮಂಡಳಿ, ಪ್ರಾಂಶುಪಾಲರಾದ ಜೋಸ್ಟನ್ ಲೋಬೋ ಸಂಯೋಜಕರಾದ ಯಶವಂತ್ ಜಿ. ನಾಯಕ್ ಹಾಗೂ ಮುಖ್ಯೋಪಾಧ್ಯಾಯಿನಿ ಯಾದ ಶ್ರೀಮತಿ ವಿಜಯ ಕೆ ಇವರು ಅಭಿನಂದಿಸಿ ರಾಜ್ಯಮಟ್ಟದ ಸ್ಪರ್ಧೆಯಲ್ಲೂ ಇದೇ ರೀತಿ ಸಾಧನೆ ಮಾಡುವಂತೆ ಶುಭ ಹಾರೈಸಿರುತ್ತಾರೆ .