ಕಕ್ಯಪದವು: ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಉಪ ನಿರ್ದೇಶಕರ ಕಛೇರಿ, ಶಾಲಾ ಶಿಕ್ಷಣ ಇಲಾಖೆ ದ.ಕ ಜಿಲ್ಲೆ,ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಮೂಡಬಿದಿರೆ ಹಾಗೂ ಸೈಂಟ್ ಥೋಮಸ್ ಆಂಗ್ಲ ಮಾಧ್ಯಮ ಶಾಲೆ ಮೂಡಬಿದಿರೆ ಇದರ ಸಹಭಾಗಿತ್ವದಲ್ಲಿ ಡಿಸೆಂಬರ್ 22 ರಂದು ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯು ನಡೆಯಿತು.
ಎಲ್ ಸಿ ಆರ್ ಇಂಡಿಯನ್ ವಿದ್ಯಾ ಸಂಸ್ಥೆಯ ಪ್ರತೀಕ್ಷಾ ಆರ್. ಕೆ 10ನೇ ತರಗತಿ ತನ್ವಿ ಜೆ.ಪಿ 8ನೇ ತರಗತಿ ಇವರು ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಭಾಗವಹಿಸಿದ್ದು, ಪ್ರತೀಕ್ಷಾ ಆರ್.ಕೆ 10ನೇ ತರಗತಿ ಇವರು ಚರ್ಚಾ ಸ್ಪರ್ಧೆಯಲ್ಲಿ ಭಾಗವಹಿಸಿ ಪ್ರಥಮ ಸ್ಥಾನವನ್ನು ಪಡೆಯುವುದರ ಮೂಲಕ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿ ವಿದ್ಯಾಸಂಸ್ಥೆಗೆ ಕೀರ್ತಿಯನ್ನು ತಂದಿರುತ್ತಾರೆ.
ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಇವರು ತೋರಿದ ಅದ್ವಿತೀಯ ಸಾಧನೆಗೆ ಇವರನ್ನು ಪ್ರಶಂಸಿಸಿ ಸಂಸ್ಥೆಯ ಆಡಳಿತ ಮಂಡಳಿ, ಪ್ರಾಂಶುಪಾಲರು, ಸಂಯೋಜಕರು, ಮುಖ್ಯ ಶಿಕ್ಷಕಿ ಹಾಗೂ ಬೋಧಕ ಬೋಧಕೇತರ ಸಿಬ್ಬಂದಿ ವರ್ಗದವರು ಅಭಿನಂದಿಸಿ ಶುಭ ಹಾರೈಸಿದರು.